ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ: ಸಾಹಿತಿ ಮಾರ್ತಾಂಡಪ್ಪ ಕತ್ತಿ
Students should develop a scientific attitude: Literary writer Marthandappa Katti
ಧಾರವಾಡ 24: ವಿಜ್ಞಾನ ಮತ್ತು ತಂತ್ರಜ್ಞಾನ ಜೀವನದ ಒಂದು ಭಾಗವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನ ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಉಪಯೋಗವಾಗುವ ಕೊಡುಗೆಗಳನ್ನು ನೀಡಬೇಕು ಅಲ್ಲದೇ ನಮ್ಮ ನಿತ್ಯದ ಪಠ್ಯದ ಜೊತೆಗೆ ಇತರ ಚಟುವಟಿಕೆಗಳನ್ನು ರೂಡಿಸಿಕೊಂಡು ಬದುಕಿನ ಆಯಾಮಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಾಹಿತಿ, ಸಂಘಟಕ ಮಾರ್ತಾಂಡಪ್ಪ ಕತ್ತಿ ಹೇಳಿದರು.
ಅವರು ಪಾಪ್ಯುಲರ ವಾಣಿಜ್ಯ ವಿದ್ಯಾ ಶಾಲೆ, ಧಾರವಾಡ ಇದರ ವತಿಯಿಂದ ಜುಲೈ-2025ರಲ್ಲಿ ನಡೆದ ವಾಣಿಜ್ಯ ಹಾಗೂ ಗಣಕಯಂತ್ರದ (ಕಂಪ್ಯುಟರ್) ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಿಳ್ಕೋಡಿಗೆ ಸಮಾರಂಭ ಮತ್ತು ಮಾಕ್ಸ ಕಾರ್ಡ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭವಿಷ್ಯದ ಜೀವನವನ್ನು ಪ್ರಾಮಾಣಿಕತೆ, ಶ್ರದ್ಧೆ, ಆಸಕ್ತಿ, ಉತ್ತಮಗುರಿಯೊಂದಿಗೆ ಹಾಗೂ ಹಿರಿಯ ಮಾರ್ಗದರ್ಶನದೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಈ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ್, ಶಾಲೆಯ ಸಂಯೋಜಕರಾದ ಸಂಜನಾ ಮುಳ್ಳೂರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ವಾಣಿಜ್ಯ ವಿದ್ಯಾಶಾಲೆಯ ಪ್ರಾಚಾರ್ಯರಾದ ಸುರೇಶ ಹಾದಿಮನಿ ವಹಿಸಿಕೊಂಡು ಅಭಿಪ್ರಾಯ ವ್ಯಕ್ತಪಡಿಸಿದರು. ಮೇಘಾ ಪಾಟೀಲ ಗಣ್ಯರನ್ನು ಸ್ವಾಗತಿಸಿಕೊಂಡು, ನಿರೂಪಿಸಿದರು. ಶಿವಪ್ರಸಾದ ಕೆ ವಾಯ್ ಪ್ರಾರ್ಥಿಸಿದರು, ಅಂಜಲಿ ವಂದಿಸಿದರು. ನಂತರ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 