ವಿದ್ಯಾರ್ಥಿಗಳು ಅವಿಷ್ಕಾರದ ಜ್ಞಾನ ಮತ್ತು ಹೊಸತನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಬೆಳೆಸಿಕೋಳ್ಳಬೇಕು: ಪ್ರಿಯಾ ಸವದಿ
Students should develop innovative knowledge and the ability to create new things: Priya Savadi
ಲೋಕದರ್ಶನ ವರದಿ
ವಿದ್ಯಾರ್ಥಿಗಳು ಅವಿಷ್ಕಾರದ ಜ್ಞಾನ ಮತ್ತು ಹೊಸತನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಬೆಳೆಸಿಕೋಳ್ಳಬೇಕು: ಪ್ರಿಯಾ ಸವದಿ
ಬೆಳಗಾವಿ 18 : ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂಧ್ರನಾಥ ಟ್ಯಾಗೋರ ಪ.ಪೂ.ಮಹಾವಿದ್ಯಾಲಯ ಆಯೋಜಿಸಿರುವ “ಇನ್ಪೋತ್ಸವ-2ಞ25” ವಿಜ್ಞಾನ ವಸ್ತು ಪ್ರದರ್ಶನವನ್ನು ಶನಿವಾರ ದಿನಾಂಕ 18-10-2025 ರಂದು ಮರಾಠಾ ಮಂದಿರ ಕಾರ್ಯಾಲಯದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈಗಿನ ಕಾಲಮಾನವನ್ನು ಡಿಜಿಟಲ್ ಸುವರ್ಣಯುಗ ಎನ್ನಬಹುದು. ಕೃತಕ ಬುದ್ದಿ ಮತ್ತು ತಂತ್ರಜ್ಞಾನಗಳು ಮನುಷ್ಯನ ಜಾಗದಲ್ಲಿ ನಿಂತು ಕೆಲಸ ಮಾಡಲು ಪ್ರಾರಂಭಿಸಿವೆ. ಈ ಕ್ಷೇತ್ರಗಳಲ್ಲಿ ಹೊಸ ಹೊಸ ಮುಂದುವರೆದ ತಂತ್ರಜ್ಞಾನಗಳನ್ನು ಬಳಸಲು ಅನೇಕ ದೇಶಗಳು ಮುಂದೆ ಬರುತ್ತಿವೆ. ಹೀಗಾಗಿ ಯುವ ಸಮೂಹಕ್ಕೆ ಅದರಲ್ಲೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಹೇರಳವಾಗಿ ಲಭ್ಯವಾಗಲಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷರಾದ ಪ್ರಾಂಶುಪಾಲ ಡಾ.ಸಿ.ಎನ್.ನಾಯ್ಕರ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ನೈತಿಕ ಮೌಲ್ಯದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಮೌಲ್ಯಯುತ ಬದುಕನ್ನು ನಮ್ಮದಾಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಉನ್ನತಿ ಹೊಂದಲು ಸಾಧ್ಯ. ತಂತ್ರಜ್ಞಾನದಿಂದ ಅನುಕೂಲ ಮತ್ತು ಅನಾನೂಕೂಲ ಎರಡೂ ಇದೆ. ಆದ್ದರಿಂದ ಜ್ಞಾನವನ್ನು ಯಾವ ರೀತಿ ಬಳಕೆ ಮಾಡಿಕೊಳ್ಳಬೇಕೆಂಬುದನ್ನು ಅರಿತರೆ ಸುಗಮ. ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ರಾಷ್ಟ್ರ ಕಟ್ಟುವ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ. ಶ್ವೇತಾ ಸಿ.ನಾಯ್ಕರ ಮಾತನಾಡಿ, ಕಳೆದ ಒಂದು ದಶಕದಿಂದ ವಿದ್ಯಾರ್ಥಿಗಳಿಗೆ ನಾಯ್ಕರ ಶಿಕ್ಷಣ ಸಂಸ್ಥೆಯು ಮೌಲ್ಯಯುತ ಶಿಕ್ಷಣ ನೀಡಿಕೊಂಡು ಬಂದಿದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಿದಾಗ ಉತ್ತಮ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ನುಡಿದರು. ಹಾಗೂ ವಿಜ್ಞಾನ ವಸ್ತು ಪ್ರದರ್ಶನಕ್ಕೆ ವಿವಿಧ ಶಾಲೆಗಳಿಂದ ಆಗಮಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗದ ಸುಮಾರು 1500 ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ವೇದಿಕೆಯ ಮೇಲೆ ಮುಖ್ಯ ಆತಿಥಿಗಳಾದ. ಪ್ರಿಯಾ ಸವದಿ, ಪ್ರಾಂಶುಪಾಲ ಡಾ.ಸಿ.ಎನ್.ನಾಯ್ಕರ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ. ಶ್ವೇತಾ ಸಿ.ನಾಯ್ಕರ ಹಾಗೂ ಯುನಿಯನ್ ಬ್ಯಾಂಕ ಮುಖ್ಯಸ್ಥ ಶ್ರೀ.ಜ್ಞಾನೇಶ ಕುಮಾರ ವೇದಿಕೆಯ ಮೇಲೆ ಉಪಸ್ಥಿತರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 