ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಕ್ಕೆ ಒತ್ತು ನೀಡಬೇಕು
Students should emphasize discipline and punctuality.
ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಕ್ಕೆ ಒತ್ತು ನೀಡಬೇಕು
ಬ್ಯಾಡಗಿ 03: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಒತ್ತಡದಲ್ಲಿ ತಮ್ಮ ಆರೋಗ್ಯದ ಕಡೆ ಗಮನಹರಿಸಿ ಪಠ್ಯದೊಂದಿಗೆ ಶಿಸ್ತುಮಯ ಜೀವನ ಶೈಲಿಯನ್ನು ರೂಡಿಸಿಕೊಳ್ಳಬೇಕು ಎಂದು ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ನ್ಯಾಸ ರಾಜ್ಯ ಸಂಚಾಲಕರು ಹಾಗೂ ಮಾಜಿ ಸೈನಿಕರು ಎಂಡಿ ಚಿಕ್ಕಣ್ಣನವರ್ ಹೇಳಿದರು. ಪಟ್ಟಣದ ಶ್ರೀ ಮಹಾಂತೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಹಾಗೂ ಆದರ್ಶ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಜೀವನ ಶೈಲಿ ಕುರಿತು ವಿಶೇಷ ಉಪನ್ಯಾಸವನ್ನು ನೀಡಿ ಮಾತನಾಡಿದವರು.
ವಿದ್ಯಾರ್ಥಿಗಳು ತಂದೆ ತಾಯಿ ಗುರುವಿಗೆ ಮೊದಲು ಮಹತ್ವ ಕೊಡಬೇಕು ಎಷ್ಟು ಅಂಕಗಳನ್ನು ಗಳಿಸಿರುವೆನು ಎನ್ನುವುದು ಮುಖ್ಯವಲ್ಲ ಶಿಕ್ಷಣದಿಂದ ಎಷ್ಟು ಸಂಸ್ಕಾರ ಕಲ್ತಿದ್ದೇವೆ ಎನ್ನುವುದು ಮುಖ್ಯ. ಹದಿ ಹರೆಯದ ವಯಸ್ಸಿನಲ್ಲಿ ದೈಹಿಕ ಮತ್ತು ಭಾವನಾತ್ಮಕ ಮತ್ತು ಸಾಮಾಜಿಕ ಬೆಳವಣಿಗೆಗಳು ಸಾಮಾನ್ಯವಾಗಿದ್ದು ಈ ಸಂದರ್ಭ ವಿದ್ಯಾರ್ಥಿಗಳು ತಮ್ಮ ಆರೋಗ್ಯ ಮತ್ತು ಜೀವನದ ಮೇಲಾಗುವ ದುಷ್ಪರಿಣಾಮ ಅರಿತು ಮುನ್ನಡೆಯಬೇಕು. ಈ ಸಮಯದಲ್ಲಿ ವಿದ್ಯಾರ್ಥಿಗಳು ಆರೋಗ್ಯಕರ ಜೀವನವನ್ನು ಉತ್ತೇಜಿಸುವ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಜೊತೆಗೆ ಅವರ ಭಾವನಾತ್ಮಕ ಬೆಂಬಲ ನೀಡಿದರೆ ಯುವ ಸಮುದಾಯ ಸುಧಾರಿಸಲಿದೆ ಶಿಸ್ತು ವಿದ್ಯಾರ್ಥಿಗಳಿಗೆ ಅಗತ್ಯ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಸ್ತು ಮತ್ತು ಸಮಯಕ್ಕೆ ಹೆಚ್ಚಿನ ಒತ್ತು ನೀಡದಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಮುಂದೆ ಬರಲು ಸಾಧ್ಯ ವಿದ್ಯಾರ್ಥಿಗಳು ದುಷ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.ಲಕ್ಷ್ಮಿ ವಾಲ್ಮೀಕಿ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು ಲಕ್ಷ್ಮಿ ವಿಜಣಿ ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು ಮಾರುತಿ ಗಣಜೂರ್ ಕಾರ್ಯದರ್ಶಿಗಳಾದ ಸಂಜೀವ ಅಂಗಡಿ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 