ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆಗೆ ಒತ್ತು ನೀಡಬೇಕು: ಉಮೇಶ್ ಬಮ್ಮಕ್ಕನವರ
Students should focus on all-round development alongside education: Umesh Bammakkanavara
ಲೋಕದರ್ಶನ ವರದಿ
ಧಾರವಾಡ 18 : ವಿದ್ಯಾರ್ಥಿಗಳು ಕೇವಲ ಪಠ್ಯಾಭ್ಯಾಸಕ್ಕೆ ಸೀಮಿತವಾಗದೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಸರ್ವಾಂಗೀಣ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ್ ಬಮ್ಮಕ್ಕನವರ ಹೇಳಿದರು.
ನಗರದ ಕೆ.ಇ. ಬೋರ್ಡ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ, ಎನ್ಎಸ್ಎಸ್ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ಆಧುನಿಕ ತಂತ್ರಜ್ಞಾನದ ಅತಿಯಾದ ಬಳಕೆಯಿಂದ ಗುರುಗಳ ಮೇಲಿನ ಗೌರವ ಹಾಗೂ ಸಂಸ್ಕೃತಿ ಕುಗ್ಗುತ್ತಿರುವುದು ಆತಂಕದ ವಿಷಯವಾಗಿದೆ. ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ವದ ಹಂತವಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಏಕಾಗ್ರತೆ ಮತ್ತು ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪೊಲೀಸ್ ಹೆಡ್ಕ್ವಾರ್ಟರ್ಸ್ನ ಸಿಪಿಐ ಫಕೀರೇಶ ದೊಕ್ಕಣ್ಣವರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂವಹನ ಕೌಶಲ್ಯ ಮತ್ತು ವಿವಿಧ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ ಶಿಕ್ಷಣದ ಹಕ್ಕನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಡಾ. ಸುನೀತಾ ಜಿ. ಕಡಪಟ್ಟಿ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳು ಹಾಗೂ ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಕಲ್ಯಾಣ ನಿಧಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ನೋಟ್ಪುಸ್ತಕ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ವಿವಿಧ ವಿಭಾಗಗಳ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಎಸ್.ಎಲ್. ಶೇಖರಗೌಡ, ಉಪಪ್ರಾಚಾರ್ಯ ಎನ್.ಎಸ್. ಗೋವಿಂದರೆಡ್ಡಿ, ಉಪನ್ಯಾಸಕರಾದ ಭಾರ್ಗವಿ ಪಿ., ಜಿ.ಸಿ. ಕುಲಕರ್ಣಿ, ಮಹೇಶ್ ತೊಗಲಂಗಿ, ಎಚ್.ಎಸ್. ಕರಿಗಾರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 