ವಿದ್ಯಾರ್ಥಿಗಳು ಪುಸ್ತಕಗಳ ಜೊತೆಗೆ ಪರಿಸರದ ಕಡೆಗೆ ಗಮನಹರಿಸಬೇಕು: ಪುಣೇಕರ್
ವಿಜಯಪುರ 05 ವಿಜಯಪುರ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಸಿಕ್ಯಾಬ್ ಪದವಿ ಪೂರ್ವ ಮಹಿಳಾ ಕಾಲೇಜಿನ 2025-26 ನೇ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಯ ನಿರ್ದೇಶಕರಾದ ಸಲಾವುದ್ದಿನ್ ಪುಣೇಕರ್ ಮಾತನಾಡಿದರು.
ಈ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಗಳ ಜೊತೆಗೆ ಪರಿಸರದ ಕಡೆಗೆ ಗಮನಹರಿಸಬೇಕು. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾಭ್ಯಾಸ ಮಾಡಬೇಕು ಎಂದರು. ಇಂದಿನ ವಿದ್ಯಾರ್ಥಿಗಳು ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಕಾಲೇಜು ಸಂದರ್ಭದಲ್ಲಿ ಉತ್ತಮ ಸ್ನೇಹ ಬಾಂದವ್ಯ ಬೆಳಿಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.ಸಿಕ್ಯಾಬ್ ಪಿಯು ಕಾಲೇಜುಗಳ ಡೀನ್ ಎನ್. ಎಸ್. ಬೂಸನೂರ ಅವರು ಮಾತನಾಡಿ ವಿದ್ಯಾರ್ಥಿಗಳಾದವರು ಕೇವಲ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಮೇಲೆ ಸಿಮಿತವಾಗಿರಬಾರದು, ಅದಕ್ಕಿಂತ ಹೆಚ್ಚಿನದನ್ನು ಇತರ ವಿಷಯಗಳಲ್ಲೂ ಜ್ಞಾನಾರ್ಜನೆಯನ್ನು ಪಡೆಯಬೇಕು.ಈ ಎರಡು ವರ್ಷಗಳು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ಹಾಗೆಯೇ ತಮ್ಮ ಪೋಷಕರು ಮತ್ತು ಶಿಕ್ಷಕರ ನೀರೀಕ್ಷೆಗಳನ್ನು ಈಡೇರಿಸಲು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮತ್ತು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲು ತಮ್ಮ ಶಿಕ್ಷಕರ ಸಂಪೂರ್ಣ ಸಹಾಯ ಮತ್ತು ಮಾರ್ಗದರ್ಶನ ಪಡೆದುಕೊಳ್ಳುವಂತೆ ಅವರು ಪ್ರೇರೇಪಿಸಿದರು.
ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಯನ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆಯಿಶಾ ಜಾಘಿರದಾರ, ಸ್ವಾಲೇಹಾ ಶೇಖ್, ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಎಂ. ಎಂ. ಗುರಡಿ, ಉಪ ಪ್ರಾಂಶುಪಾಲರಾದ ಡಾ. ಸಾದಿಕಾ ದಫೇದಾರ, ಹಾಗೂ ಉಪನ್ಯಾಸಕರಾದ ಎಸ್. ಆರ್. ಬ್ಯಾಕೋಡ, ಯು. ಎನ್. ಕುಂಟೊಜಿ, ರಿಯಾಜ್ ಜೀರಗಾಳ, ಮತ್ತಿತರರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 