ವಿದ್ಯಾರ್ಥಿಗಳು ದೇಶಭಕ್ತಿ, ಶಿಸ್ತು ಮೈಗೂಡಿಸಿಕೊಳ್ಳಿ : ಮಾಥಂರ್ಡಪ್ಪ
Students should inculcate patriotism and discipline: Mathandappa
ಶಿಗ್ಗಾವಿ 29 : ಫೀನಿಕ್ಸ್ ಇಂಟರ್‌ನ್ಯಾಷನಲ್ ಸ್ಕೂಲ್ ಆವರಣದಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಭಾರತೀಯ ಸೇನೆಯ ಸೀನಿಯರ್ ಎನ್‌ಸಿಒ ಮಾಥಂರ್ಡಪ್ಪ ಕೋಟಿ ನೇರವೇರಿಸಿ ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು,ಪರಿಶ್ರಮ ಹಾಗೂ ಗುರಿಸಾಧನೆಯ ಪ್ರೇರಣಾದಾಯಕ ಅಂಶಗಳು ಮೈಲುಗಲ್ಲು ಗಳಾಗಬೇಕು ಎಂದು ಹೇಳಿದರು. ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ (ಏಂಃಖ) ನಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಪ್ರದಾನ ಮಾಡಲಾಯಿತು. ಜೊತೆಗೆ ಶಾಲೆಗೆ ಲಭಿಸಿದ ಏಂಃಖ ಪ್ರಶಸ್ತಿಯನ್ನು, ಈ ಸಾಧನೆ ರೂವಾರಿ ಶಾಲೆಯ ಪಿಆರ್‌ಒ ಶಶಾಂಕ ಕೌಜಲಗಿ ಸ್ವೀಕರಿಸಿದರು.
ಪಿನಿಕ್ಸ್ ಇಂಟರ್ನ್ಯಾಷನಲ್ ಸಮೂಹ ಸಂಸ್ಥೆ ಅಧ್ಯಕ್ಷ ಡಾ. ಎಂ.ಎಂ. ತಿರ್ಲಾಪುರ ಮಾತನಾಡಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ, ಮೌಲ್ಯಗಳು ಮತ್ತು ಶಿಸ್ತು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳ ಅಗತ್ಯತೆ ಬಗ್ಗೆ ತಿಳಿಸಿದರು. ಉಪಾಧ್ಯಕ್ಷ ನರಹರಿ ಕಟ್ಟಿ ಮಾತನಾಡಿ ವಿದ್ಯಾರ್ಥಿಗಳು ದೃಢ ನಿಶ್ಚಯದಿಂದ ಗುರಿಯನ್ನು ಸಾಧಿಸಬೇಕೆಂದು ಕರೆ ನೀಡಿದರು. ಕಾರ್ಯದರ್ಶಿ ಡಾ. ರಾಣಿ ತಿರ್ಲಾಪುರ ಮಾತನಾಡಿ ಫೀನಿಕ್ಸ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳ ಸಾಧನೆಗಳ ಯಶಸ್ಸಿಗೆ ಪಾಲಕರು ಮತ್ತು ಶಿಕ್ಷಕರ ಸಹಕಾರವನ್ನು ಶ್ಲಾಘಿಸಿದರು. ಪ್ರಾಂಶುಪಾಲ ಗಿರಿಧರ್ ಎಮಲೆ ಮಾತನಾಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ರಾಷ್ಟ್ರದ ಉತ್ತಮ ನಾಗರಿಕರಾಗಿ ರೂಪುಗೊಳ್ಳುವಂತೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಪೋಷಕರ ಪ್ರತಿನಿಧಿಯಾಗಿ ಇಬ್ರಾಹಿಂ ಕಳಸಗೇರಿ,ಫೀನಿಕ್ಸ್ ಶಾಲೆ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 