ಹಸೀರೀಕರಣಕ್ಕೆ ವಿದ್ಯಾರ್ಥಿಗಳು ಕೈಜೋಡಿಸಲಿ: ಪ್ರೊ. ವಿಜಯಾ ಕೋರಿಶೆಟ್ಟಿ
Students should join hands for greening efforts: Prof. Vijaya Korishetti
ಲೋಕದರ್ಶನ ವರದಿ
ವಿಜಯಪುರ 11 : ಜೈವಿಕ ಇಂಧನವು ಭವಿಷ್ಯದ ಪ್ರಮುಖ ಇಂಧನ ಮೂಲವಾಗಿದ್ದು, ದೇಶದಲ್ಲಿ ಜೈವಿಕ ಇಂಧನದ ಬಳಕೆ, ಉತ್ಪಾದನೆ ಹಾಗೂ ಸಂಶೋಧನೆಗೆ ಹೆಚ್ಚಿನ ವೇಗ ನೀಡಬೇಕಾಗಿದೆ ಎಂದು ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ಅಧ್ಯಯನ ವಿಭಾಗ, ಅರಣ್ಯ ಇಲಾಖೆ ವಿಜಯಪುರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವಿಜಯಪುರ ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಜೈವಿಕ ಇಂಧನ ಅರಿವು ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕ ಕೇಂದ್ರದ ಆವರಣದಲ್ಲಿ ಇತ್ತಿಚಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಹಸೀರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬ ಸೇರಿದಂತೆ ವಿಶೇಷ ದಿನಗಳನ್ನು ಸಸಿ ನೆಡುವ ಮೂಲಕ ಆಚರಿಸಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು ಅಷ್ಟೇ ಅಲ್ಲದೇ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರಸಕ್ತ ವರ್ಷ ಸುಮಾರು 3 ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಬಾಬು ಸಜ್ಜನ ಮಾತನಾಡಿ, ಜೈವಿಕ ಇಂಧನ ಕ್ಷೇತ್ರದಲ್ಲಿರುವ ಖಾಸಗಿ ಹಾಗೂ ಸರ್ಕಾರಿ ವಲಯದ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೆಲ್ವರಾಜ ಮಾತನಾಡಿ, ಜೈವಿಕ ಇಂಧನ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದಿರುವ ವಿವಿಧ ಸಂಶೋಧನೆಗಳು ಹಾಗೂ ಬೆಳವಣಿಗೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ವಿದ್ಯಾರ್ಥಿನಿಯರಿಗಾಗಿ ಜೈವಿಕ ಇಂಧನ ವಿಷಯದ ಕುರಿತು ಕಿರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ಸಂಯೋಜಕ ಡಾ. ಬಾಬು ಆರ್. ಎಲ್. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿ, ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಕೌಶಲ್ಯ ತಂತ್ರಜ್ಞಾನ ಪಾರ್ಕ್ ವಿಶೇಷಾಧಿಕಾರಿ ಪ್ರೊ. ರಾಜು ಬಾಗಲಕೋಟ, ಡಾ. ರಮೇಶ ಸೊನಕಾಂಬಳೆ, ಸ್ನಾತಕ ಅಧ್ಯಯನ ವಿಭಾಗದ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 