ರಕ್ತದಾನದಿಂದ ಜೀವ ಉಳಿಸುವ ಸಂಕಲ್ಪಕ್ಕೆ ವಿದ್ಯಾರ್ಥಿಗಳು ಕೈಜೊಡಿಸಬೇಕು
Students should join hands in the resolve to save lives by donating blood
ಲೋಕದರ್ಶನ ವರದಿ
ಹುಲಕೋಟಿ 21: ರಕ್ತದಾನವು ಮಾನವೀಯತೆಯ ಅತ್ಯುನ್ನತ ಸಾರ್ವಕಾಲಿಕ ಜೀವನ ಮೌಲ್ಯಗಳಲ್ಲಿ ಒಂದಾಗಿದ್ದು, ‘ಒಂದು ಹನಿ ರಕ್ತ ಒಂದು ಜೀವ ರಕ್ಷಣೆ’ ಎಂಬ ಮಾತಿನಂತೆ ನಮ್ಮಿಂದ ದಾನ ಮಾಡಲ್ಪಡುವ ಸ್ವಲ್ಪ ರಕ್ತವೇ ಯಾರಾದರೂ ಜೀವ ಉಳಿಸಲು ಕಾರಣವಾಗಬಹುದೆಂದು ಜಿಲ್ಲಾ ಆರೋಗ್ಯ ಇಲಾಖೆಯ ಮೇಲ್ವಿಚಾರಕ ಬಸವರಾಜ ಲಾಲಗಟ್ಟಿ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ, ಯುವ ರೆಡ್‌ಕ್ರಾಸ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ರಿಬ್ಬನ್, ಎನ್.ಎಸ್.ಎಸ್. ಘಟಕಗಳು ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಜನ್ಮಜಯಂತಿ ಅಂಗವಾಗಿ ಕೆ.ಎಚ್. ಪಾಟೀಲ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ದ ರಕ್ತನಿಧಿ ಕೇಂದ್ರ, ಜಿಲ್ಲಾ ಆರೋಗ್ಯ ಇಲಾಖೆ, ಡಿ.ಎ.ಪಿ.ಸಿ.ಯು ವಿಭಾಗಗಳ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಮತ್ತು ಆರೋಗ್ಯ ತಪಾಸಣೆ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತ ವಿದ್ಯಾರ್ಥಿಗಳು ಆರೋಗ್ಯಕರವಾಗಿದ್ದರೆ ನಿಯಮಿತವಾಗಿ ರಕ್ತದಾನ ಮಾಡಬೇಕೆಂದು ಕರೆ ನೀಡಿದರು.
ರೆಡ್‌ಕ್ರಾಸ್ ಸಂಯೋಜಕಿ ಮಹಾನಂದಾ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡುತ್ತ ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದ್ದು, ಇದು ಅನೇಕ ಜೀವಗಳನ್ನು ಉಳಿಸುವಲ್ಲಿ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ರಕ್ತದಾನದಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಪ್ರಾಚಾರ್ಯೆ ಡಾ. ಸುಧಾ ಕೌಜಗೇರಿ ಅಧ್ಯಕ್ಷೀಯ ಮಾತುಗಳನ್ನಾಡುತ್ತ ರಕ್ತದಾನವು ಕೇವಲ ದಾನವಲ್ಲ, ಇದು ಜೀವದಾನವಾಗಿದ್ದು, ಆರೋಗ್ಯವಾಗಿರುವ ವಿದ್ಯಾರ್ಥಿಗಳು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಬಹುದೆಂದರು.
ಕುಮಾರಿ ಅಕ್ಷತಾ ಸಂಗಟಿ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕದ ಸಹ ಸಂಯೋಜಕ ವಿಜಯಕುಮಾರ ಎಸ್. ಗಣ್ಯಮಾನ್ಯರನ್ನು ಸ್ವಾಗತಿಸಿದರು. ಕನ್ನಡ ಪ್ರಾಧ್ಯಾಪಕ ಭೀಮೇಶ ವಂದನಾರೆ್ಣಗೈದರು. ರೇಂಜರ್ಸ್ ಸಂಯೋಜಕಿ ಸಾವಿತ್ರಿ ಟಿ. ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಆರೋಗ್ಯ ಇಲಾಖೆಯ ಡೆಪೋ ಅಧಿಕಾರಿ ಡಾ. ಆರುಂಧತಿ ಕೆ. ಮತ್ತು ಜಿಮ್ಸ್ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಮೋನಿಕಾ ಹಾಗೂ ಸಿಬ್ಬಂದಿಯವರು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಗೌರವಕ್ಕೆ ಪಾತ್ರರಾದರು. ರಕ್ತದಾನ ಮಾಡಿದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಕೊಡಮಾಡಿ ಗೌರವಿಸಲಾಯಿತು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 