ವಿದ್ಯಾರ್ಥಿಗಳು ಹಣಕಾಸು-ಹೂಡಿಕೆ ಕೌಶಲ್ಯ ಕಲಿಯಬೇಕು: ಶಂಕರಗೌಡ ಸೋಮನಾಳ
Students should learn financial and investment skills: Shankaragowda Somanala
ವಿಜಯಪುರ 10: ಇಂದಿನ ಯುಗದಲ್ಲಿ ತೆರಿಗೆ ಸಲ್ಲಿಕೆ ಮತ್ತು ಶೇರು ಮಾರುಕಟ್ಟೆ ವ್ಯಾಪಾರ ಎರಡೂ ವ್ಯಕ್ತಿಯ ಹಣಕಾಸು ಸಾಮರ್ಥ್ಯವನ್ನು ನಿರ್ಧರಿಸುವ ಪ್ರಮುಖ ಕೌಶಲ್ಯಗಳಾಗಿವೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ವಿಭಾಗದಲ್ಲಿ ಆಯೋಜಿಸಿದ್ದ ಭಾರತ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಪಿಎಂ ಉಷಾ ಮತ್ತು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಪರಿಷತ್ತಿನ ಅಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಹಣಕಾಸು ಸಾಮರ್ಥ್ಯ ನಿರ್ಮಾಣ: ತೆರಿಗೆ ಸಲ್ಲಿಕೆ ಮತ್ತು ಷೇರು ಮಾರುಕಟ್ಟೆ ವ್ಯಾಪಾರಗಳ ಕೌಶಲ್ಯ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉದ್ಯಮ, ಹಣಕಾಸು ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ಉದ್ಯೋಗೋಚಿತ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಅಷ್ಟೇ ಅಲ್ಲದೇ ಇಂತಹ ಕೌಶಲ್ಯಗಳು ಭವಿಷ್ಯದ ವೃತ್ತಿಜೀವನದಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸುತ್ತವೆ ಎಂದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಂಗಳೂರಿನ ನಾಗರಭಾವಿಯ ಕೆಎಲ್‌ಇ ಸೊಸೈಟಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಆರ್. ಮಧನ್ ಕುಮಾರ್ ಮಾತನಾಡಿ, ಸ್ಟಾಕ್ ಮಾರ್ಕೆಟ್‌ನ ಮೂಲಭೂತ ತತ್ವಗಳು, ಹೂಡಿಕೆಯ ಆಯಾಮಗಳು, ಡಿಜಿಟಲ್ ಹೂಡಿಕೆ ವೇದಿಕೆಗಳು ಹಾಗೂ ವಿದ್ಯಾರ್ಥಿಗಳು ಅನುಸರಿಸಬೇಕಾದ ಸುರಕ್ಷಿತ ಹೂಡಿಕೆ ಕ್ರಮಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ದರ್ಶನ್ ಎಸ್, ಪವರ್ ಃಋ ಮತ್ತು ಎಕ್ಸೆಲ್ ತಜ್ಞ ತರಬೇತುದಾರರು, ಸ್ಟಾಕ್ ಮಾರ್ಕೆಟ್ ಇನ್‌ಸ್ಟಿಟ್ಯೂಟ್, ಬೆಂಗಳೂರು ಅವರು ಮಾತನಾಡಿ ವೈಯಕ್ತಿಕ ಹಣಕಾಸು ನಿರ್ವಹಣೆ, ತೆರಿಗೆ ದಾಖಲಾತಿಗಳ ಅವಶ್ಯಕತೆ, ಆದಾಯ ತೆರಿಗೆ ವರದಿ ಸಲ್ಲಿಕೆ ವಿಧಾನಗಳು ಹಾಗೂ ವಿದ್ಯಾರ್ಥಿಗಳಿಗೆ ಅವಶ್ಯವಿರುವ ಹಣಕಾಸು ಜ್ಞಾನ ಕುರಿತು ಅವರು ಪ್ರಾಯೋಗಿಕ ಉದಾಹರಣೆಗಳ ಮೂಲಕ ವಿವರಿಸಿದರು.
ಕಾರ್ಯಾಗಾರದ ಮತ್ತೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಬೆಂಗಳೂರಿನ ಸ್ಟಾಕ್ ಮಾರ್ಕೆಟ್ ಇನ್‌ಸ್ಟಿಟ್ಯೂಟ್, ಪವರ್ ಐಬಿ ಹಾಗೂ ಎಕ್ಸೆಲ್ ತಜ್ಞ ತರಬೇತುದಾರ ಡಾ. ದರ್ಶನ್ ಎಸ್ ಮಾತನಾಡಿ, ವೈಯಕ್ತಿಕ ಹಣಕಾಸು ನಿರ್ವಹಣೆ, ತೆರಿಗೆ ದಾಖಲಾತಿಗಳ ಅವಶ್ಯಕತೆ, ಆದಾಯ ತೆರಿಗೆ ವರದಿ ಸಲ್ಲಿಕೆ ವಿಧಾನಗಳು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಹಣಕಾಸು ಜ್ಞಾನವನ್ನು ಪ್ರಾಯೋಗಿಕ ಉದಾಹರಣೆಗಳ ಮೂಲಕ ವಿವರಿಸಿದರು.
ಕಾರ್ಯಾಗಾರದ ಸಂಯೋಜಕಿ ಪ್ರೊ ಅನಿತಾ ಆರ್ ನಾಟಿಕರ್ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಾಗಾರದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು, ಸಂಶೋಧನಾರ್ಥಿಗಳು, ಉಪನ್ಯಾಸಕರು, ಹಾಗೂ ಭೋದಕ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 