ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ ಕಲಿಯಬೇಕು: ಸದಾಶಿವಾನಂದ ಸ್ವಾಮಿ
Students should learn good manners along with education: Sadashivananda Swami
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ ಕಲಿಯಬೇಕು: ಸದಾಶಿವಾನಂದ ಸ್ವಾಮಿ
ರಾಯಬಾಗ 28: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ ಕಲಿಯಬೇಕು. ತಂದೆತಾಯಿ ಮತ್ತು ಗುರುಗಳನ್ನು ಗೌರವಿಸಬೇಕೆಂದು ಗದಗ ಬೃಹನ್ಮಠದ ಸದಾಶಿವಾನಂದ ಸ್ವಾಮಿಗಳು ಹೇಳಿದರು.ಮಂಗಳವಾರ ಅವರು ಪಟ್ಟಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆ ಕಾಲೇಜ ಆವರಣದಲ್ಲಿ ಜರುಗಿದ ಸಂಸ್ಥೆಯ 17ನೇ ಜನ್ಮದಿನೋತ್ಸವ ಸಮಾರಂಭವನ್ನು ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ತಂದೆ ತಾಯಿ, ಗುರುಗಳನ್ನು ಮರೆಯುವಂತಹ ಕಾಲದಲ್ಲಿ ಚೌಗುಲೆಯವರು ತಂದೆತಾಯಿಯವರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ, ಬಡ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದೊಂದಿಗೆ ಒಳ್ಳೆಯ ಶಿಕ್ಷಣ ನೀಡುತ್ತಿರುವ ಅತ್ಯಂತ ಶ್ಲಾಘನೀಯ ಎಂದರು. ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರ ಡಾ.ಗಜಾನನ ನಾಯಿಕ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲದಿಂದ ದೂರವಿದ್ದು, ಪುಸ್ತಕಗಳನ್ನು ಓದುವಂತಹ ಹವ್ಯಾಸ ಬೆಳೆಸಿಕೊಳ್ಳಬೇಕು. ಚೌಗುಲೆ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ಒಳ್ಳೆಯ ಶಿಕ್ಷಣ ಪಡೆಯಲು ರಾಯಬಾಗ ಮತ್ತು ಕುಡಚಿ ಪಟ್ಟಣದಲ್ಲಿ ಸಿ.ಬಿ.ಎಸ್.ಸಿ ಶಾಲೆ ಪ್ರಾರಂಭಿಸಿದ್ದು ನೋಡಿದರೆ ಅವರ ಶಿಕ್ಷಣ ಪ್ರೇಮ ತಿಳಿಯುತ್ತದೆ ಎಂದರು. ಅಧ್ಯಕ್ಷತೆಯನ್ನು ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಲ್.ಬಿ. ಚೌಗುಲೆ ವಹಿಸಿದ್ದರು. ಉಪಾಧ್ಯಕ್ಷೆ ಭಾರತಿ ಚೌಗುಲೆ, ಸಂಸ್ಥೆಯ ಕಾರ್ಯದರ್ಶಿ ವಿನಯ ಚೌಗುಲೆ, ನಿರ್ದೇಶಕರಾದ ಅಮರ ನಾಗರಾಳೆ , ಐಶ್ವರ್ಯ ಚೌಗುಲೆ, ಪ್ರಾಚಾರ್ಯರಾದ ಎಸ್.ಎಸ್.ದಿಗ್ಗೆವಾಡಿ, ಎಸ್.ಎ.ನಾಂದಣಿ, ಇಕ್ಬಾಲ ತಾಜೆವಾಲೆ, ಎಚ್.ಎಲ್.ಗುರವ, ಪಾರಿಸ ಉಗಾರೆ ಹಾಗೂ ಶಿಕ್ಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಇದ್ದರು.ರಾಯಬಾಗ 1ರಾಯಬಾಗ: ಪಟ್ಟಣದ ಬಿ.ಎ. ಚೌಗುಲೆ ಶಿಕ್ಷಣ ಸಂಸ್ಥೆ ಕಾಲೇಜ ಆವರಣದಲ್ಲಿ ಜರುಗಿದ ಸಂಸ್ಥೆಯ 17ನೇ ಜನ್ಮದಿನೋತ್ಸವ ಸಮಾರಂಭವನ್ನು ಸಸಿಗೆ ನೀರು ಹಾಕುವುದರ ಮೂಲಕ ಸದಾಶಿವಾನಂದ ಶ್ರೀಗಳು ಚಾಲನೆ ನೀಡಿದರು. ಎಲ್.ಬಿ. ಚೌಗುಲೆ, ಡಾ. ಗಜಾನನ ನಾಯಿಕ. ಎಸ್.ಎಸ್.ದಿಗ್ಗೆವಾಡಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 