ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ, ಇಷ್ಟಪಟ್ಟು ಓದಬೇಕು: ಡಾ.ಓದ್ರಾಮ
Students should not study hard, but rather enjoy studying: Dr. Odrama
ಮುಧೋಳ 21: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ, ಇಷ್ಟಪಟ್ಟು ಓದಬೇಕು, ಓರ್ವ ವ್ಯಕ್ತಿಯ ಬೆಳವಣಿಗೆ ಮತ್ತು ಅಭಿವೃದ್ಧಿ ಆತನ ಕೈಯಲ್ಲಿದೆ, ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿ ಗಳು ಮನಸಿಟ್ಟು ಓದಿದರೇ ಎಂತಹ ಕಠಿಣ ವಿಷಯಗಳು ಸರಳವಾಗಲಿವೆ, ಕಾಲೇಜಿನ ಎಲ್ಲ ಸೌಲಭ್ಯ ಗಳನ್ನು ಸಮರ್ಕವಾಗಿ ಬಳಸಿಕೊಂಡು ಸರ್ವಾಂಗೀಣ ಅಭಿವೃದ್ದಿ ಹೊಂದಬೇಕೆಂದು ಜಮಖಂಡಿ ಬಾಗಲಕೋಟ ವಿಶ್ವವಿದ್ಯಾಲಯದ ಕುಲಸಚಿವ ಡಾ.ಓದ್ರಾಮ ಹೇಳಿದರು.
ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ನ್ಯಾಕ್ ಮೌಲ್ಯಮಾಪನ ಎ ಶ್ರೇಣಿಯ 4ನೇ ಆವೃತ್ತಿಯ ಐಕ್ಯೂಎಸಿ ಅಡಿಯಲ್ಲಿ ಗುರುವಾರ ಕಾಲೇಜಿನ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ 2025-26ನೇ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣವನ್ನು ಬೆಳಸಿಕೊಳ್ಳಬೇಕು, ಸಹನೆ, ಸಾಮರ್ಥ್ಯ, ಪರಿಶ್ರಮ, ಧೈರ್ಯ, ಒಗ್ಗಟ್ಟು, ಜ್ಞಾನ, ಆತ್ಮವಿಶ್ವಾಸ, ನಿರಂತರ ಪ್ರಯತ್ನ ಸೇರಿದಂತೆ ಮುಂತಾದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಜೊತೆಗೆ ತಮ್ಮ ಅಧ್ಯಯನದ ಜೊತೆ ಜೊತೆಗೆ ಕಾಲೇಜಿನಲ್ಲಿ ನಡೆಯುವ ಪಠ್ಯೇತರ ಚಟುವಟಿಕೆಗಳಾದ ಸಾಂಸ್ಕ್ರತಿಕ, ಕ್ರೀಡೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮಲ್ಲಿರುವ ಅಘಾದ ಪ್ರತಿಭೆಯನ್ನು ತೋರಿಸಬೇಕೆಂದು ಹೇಳಿದ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈಗಿನಿಂದಲೇ ತಾವು ಸಿದ್ಧತೆ ಮಾಡಿಕೊಳ್ಳಬೇಕೆಂದು ವಿದ್ಯಾರ್ಥಿ ಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಅಧ್ಯಕ್ಷತೆವಹಿಸಿ ಮಾತನಾಡಿ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದರಲ್ಲದೆ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾರೆ ಮತ್ತು ಇನ್ನೂ ಮಾಡುತ್ತಿದ್ದಾರೆ, ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಹತ್ತಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು ಅವುಗಳಲ್ಲಿ ಪ್ರತಿಯೋರ್ವ ವಿದ್ಯಾರ್ಥಿಗಳು ಭಾಗವಹಿಸಬೇಕೆಂದರು.
ಬಾಗಲಕೋಟ ವಿ.ವಿ ಕುಲಸಚಿವರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವ ಡಾ.ಓದ್ರಾಮ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಐಕ್ಯೂಎಸಿ ಸಂಯೋಜಕ ಪ್ರೊ.ಅಜ್ಜಪ್ಪ ಕಡೂರ, ವಿದ್ಯಾರ್ಥಿ ಪ್ರತಿನಿಧಿ ಶ್ವೇತಾ ಪರಚನ್ನಗೌಡರ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಡಾ.ಪ್ರಹ್ಲಾದ ಕೆ. ಅವರು ಸ್ವಾಗತಿಸಿ, ಪರಿಚಯಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು, ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಅನೀಲಕುಮಾರ ಮುನ್ನೊಳ್ಳಿ ವಂದಿಸಿದರು, ಪ್ರೊ.ಪರಮಾನಂದ ಡಿ. ಕುಂಬಾರ ಹಾಗೂ ಪ್ರೊ.ರಾಧಾ ಆರ್. ಮಾಲಿಪಾಟೀಲ ನಿರೂಪಿಸಿದರು, ವಿದ್ಯಾರ್ಥಿ ದುರ್ಗಪ್ಪ ಲಚ್ಚವ್ವಗೋಳ ಪ್ರಾರ್ಥನೆ ಹೇಳಿದರು. ಸಾಂಸ್ಕೃತಿಕ ಹಾಗೂ ಕ್ರೀಡಾ ವಿಭಾಗದ ಸದಸ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 