ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು -ಎಂ.ಎಂ.ಮೈದೂರ
Students should participate in sports alongside their studies – M.M. Maidur
ಲೋಕದರ್ಶನ ವರದಿ
ಹಾವೇರಿ 22: ವಿದ್ಯಾರ್ಥಿಗಳು ಪಾಠದ ಜತೆಗೆ ಕ್ರೀಡೆಯಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಕ್ರೀಡೆ ಪ್ರಮುಖವಾಗಿದ್ದು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿವೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವರ್ಷ ಕ್ಲಸ್ಟರ್ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದವರೆಗೆ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಆಟದಲ್ಲಿ ಮುಂದಿದ್ದಂತೆ ಪಾಠದಲ್ಲಿ ಸಾಧನೆ ಮಾಡಬೇಕು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವ ಜತೆಗೆ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುತ್ತದೆ ಎಂದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಇನ್ನಷ್ಟು ಪದಕಗಳನ್ನು ಗೆಲ್ಲಬೇಕಾದರೆ ಕ್ರೀಡಾ ಪ್ರತಿಭೆಗಳಿಗೆ ಬಾಲ್ಯದಿಂದಲೇ ಉತ್ತಮ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳೇ ಇದಕ್ಕೆ ಬುನಾದಿಯಾಗಿದ್ದು, ಇಲ್ಲಿ ಉತ್ತಮ ಸಾಧನೆ ಮಾಡುವ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಮುನ್ನಡೆಯಬೇಕು ಎಂದು ಹೇಳಿದರು.
ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವವರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಹಾಗೂ ಉದ್ಯೋಗಾವಕಾಶಗಳಲ್ಲಿ ಮೀಸಲಾತಿಯಂತಹ ಅವಕಾಶಗಳಿವೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಅವರ ಪ್ರಯತ್ನದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸುಮಾರು ರೂ.10 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಕ್ರೀಡಾಂಗಣದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡಾಕೂಟವನ್ನು ಸ್ಪರ್ಧಾತ್ಮಕ ಮನೋಭಾವದಿಂದ ಸ್ವೀಕರಿಸಬೇಕು. ಸೋಲು-ಗೆಲುವು ಸಹಜವಾಗಿದ್ದು, ಸೋಲನ್ನು ಮುಂದಿನ ಗೆಲುವಿನ ಮೆಟ್ಟಿಲಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 