ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಾಗಿರಲಿ
Students should stay away from drug addiction
ಮಕ್ಕಳು, ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ
ವಿಜಯಪುರ 23: ಸಾಕಷ್ಟು ಯುವ ಪೀಳಿಗೆ ದಿನೇ ದಿನೇ ಮಾದಕ ವ್ಯಸನಿಗಳಾಗುತ್ತಿದ್ದು ಮಕ್ಕಳು, ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ವಿದ್ಯಾರ್ಥಿಗಳಾದವರು ಮಾದಕ ವ್ಯಸನದಿಂದ ದೂರವಾಗಿರಬೇಕು ಮಾದಕ ದ್ರವ್ಯ ಸೇರಿದಂತೆ ನಾನಾ ಚಟಗಳಿಂದ ಅದಷ್ಟೊ ವಿದ್ಯಾರ್ಥಿಗಳು ಹಾಳಾಗಿ ಹೋಗಿರುವ ಉದಾಹರಣೆಗಳು ಸಾಕಷ್ಟಿವೆ ಹಾಗಾಗಿ ಅದರಿಂದ ದೂರ ಇದಷ್ಟು ಒಳ್ಳೆಯದೆಂದು ಜಲನಗರ ಪೋಲೀಸ್ ಠಾಣೆಯ ಪಿಎಸ್‌ಐ. ಸಂಗಾಪೂರ ಸಿಪಿಐ ಮಲ್ಲಯ್ಯ ಮಠಪತಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ವಿಜಯಪುರ ನಗರದ ಹೆಸರಾಂತ ಶಿಕ್ಷಣ ಸಂಸ್ಥೆಯಾದ ಸಿಕ್ಯಾಬ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ಮತ್ತು ಸಂಚಾರಿ ನಿಯಮಗಳ ಅರಿವು ಹಾಗೂ ಸೈಬರ್ ಸೆಕ್ಯೂರಿಟಿಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇನ್ನು ಸಂಚಾರ ನಿಯಮದ ಉಲ್ಲಂಘನೆಯಿಂದ ಪ್ರಾಣಾಪಾಯ ಸಂಭವಿಸುತ್ತದೆ ಹಾಗಾಗಿ, ಅತ್ಯಮೂಲ್ಯ ಜೀವ ಉಳಿಸಿಕೊಳ್ಳಲು ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ತಪ್ಪದೆ ಪಾಲಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಹೆಲ್ಮೆಟ್ ರಹಿತ ಬೈಕ್ ಚಾಲನೆ ಮಾಡಿದರೆ ಅದು ಅಪರಾಧವಾಗುತ್ತದೆ. ರಸ್ತೆಯಲ್ಲಿ ಅಪಘಾತಗಳು ಸಂಭವಿಸಿದಾಗ ನಿಮ್ಮ ಸಹಾಯ ಹಸ್ತವನ್ನು ಚಾಚಿ ನೆರವಾಗಬೇಕು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಮತ್ತು ನಾಲ್ಕು ಚಕ್ರದ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಇದರಿಂದ ಅನಾಹುತವನ್ನು ತಪ್ಪಿಸಬಹುದು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಸಿಕ್ಯಾಬ್‌ನ ಎಐಎಂಎಲ್ ವಿಭಾಗದ ಮುಖ್ಯಸ್ಥ ಅಸ್ಲಂ ಕರ್ಜಗಿಯವರು ಮಾತನಾಡಿ ಇಂದಿನ ದಿನಮಾನಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಮತ್ತು ಸ್ಮಾರ್ಟ್ ಫೋನುಗಳು ಆಧುನಿಕ ಬದುಕಿನ ಆಧಾರಸ್ತಂಭಗಳಾಗಿರುವ ಹೊತ್ತಿನಲ್ಲೇ ಅವು ದಿನನಿತ್ಯದ ಜೀವನದ ಸವಾಲುಗಳಾಗಿಯೂ ಪರಿಣಮಿಸಿವೆ ಮತ್ತು ಇಂದು ಅಂತರ್ಜಾಲ ಎನ್ನುವುದು ನಮ್ಮೆಲ್ಲರಿಗೂ ತವರು ಮನೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಗೆಳೆಯ ಗೆಳತಿಯರ ಗುಂಪೊಂದನ್ನು ಸೃಷ್ಟಿ ಮಾಡಿಕೊಂಡು ತಮ್ಮ ಯಾವುದಾದರೂ ಪೋಟೋ ಅಪ್ಲೋಡ್ ಮಾಡುತ್ತಾರೆ. ಕಾಮೆಂಟ್ಸ ಹಾಗೂ ಲೈಕ್ಸ್ ಗಳನ್ನು ನೋಡಿಕೊಂಡು ತಮ್ಮದೇ ಲೋಕದಲ್ಲಿ ಬ್ಯುಸಿಯಾಗಿರುತ್ತಾರೆ. ನೀವು ಪೋಸ್ಟ್ ಮಾಡಿರುವ ಪೊಟೊಗಳು ಸೈಬರ್ ಕಳ್ಳರು ದುರುಪಯೋಗ ಪಡೆಸಿಕೊಳ್ಳುತ್ತಾರೆಂದು ತಿಳಿದುಕೊಳ್ಳಬೇಕು ಮತ್ತು ಜಾಗೃತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸಿಕ್ಯಾಬ್ ತಾಂತ್ರಿಕ ಸಂಸ್ಥೆಯ ಪ್ರಾಂಶುಪಾಲ ಡಾ. ಸೈಯದ್ ಅಬ್ಬಾಸ್ ಅಲಿ ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ನೇತ್ರಾವತಿ ಪುರೋಹಿತ, ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕ ಆಶಿಪ್ ಇಕ್ಬಾಲ್ ದೊಡಮನಿ. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ ಪ್ರೋ ಸಚಿನ್ ಪಾಂಡೆ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 