ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಸದುಪಯೋಗ ಪಡೆದುಕೊಳ್ಳಬೇಕು: ಡಿಸಿ
Students should take advantage of modern technology: DC
ರಾಣಿಬೆನ್ನೂರ 16: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಮತ್ತು ಸದ್ಯದ ಮಾರುಕಟ್ಟೆಯ ಅವಶ್ಯಕತೆಗಳು ಮತ್ತು ಅವಕಾಶಗಳ ಲಭ್ಯತೆ ಬಳಸಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಸದುಪಯೋಗ ಮತ್ತು ಅವಕಾಶಗಳ ಸೃಸ್ಠಿ ಮತ್ತು ಅದರ ಪ್ರಾಮುಖ್ಯತೆ ಅರಿಯಬೇಕು. ವಿದ್ಯಾರ್ಥಿನಿಯರ ಬದುಕಿನಲ್ಲಿ ಶಿಷ್ಟಾಚಾರ ಸಮಯಪಾಲನೆ ಕೌಶಲ್ಯಗಳ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ನಗರದ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ಹಾಗೂ ದೇಶಪಾಂಡೆ ಸ್ಕಿಲ್ಲಿಂಗ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಇತ್ತೀಚೆಗೆ ನಡೆದ ಸ್ಕಿಲ್‌ಪ್ಲಸ್-4 ಲ್ಯಾಬ್ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕೌಶಲ್ಯಯುಕ್ತ ಮತ್ತು ಕೌಶಲ್ಯರಹಿತ ಅಭ್ಯರ್ಥಿಗಳ ನಡುವಿನ ವ್ಯತ್ಯಾಸಗಳ ಕುರಿತು ತಿಳಿಸಿದರು
ಹುಬ್ಬಳ್ಳಿಯ ದೇಶಪಾಂಡೆ ಸ್ಕಿಲ್ಲಿಂಗ್ ಸಿ.ಇ.ಓ ಪಿ.ಎನ್. ನಾಯಕ, ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ವ್ಹಿ. ಪಿ ಲಿಂಗನಗೌಡರ, ಪ್ರೊ. ವಿದ್ಯಾಶ್ರೀ ದಾಮೋದರ, ಪ್ರಾಚಾರ್ಯ ಪ್ರೊ. ನಾರಾಯಣ ನಾಯಕ ಎ, ಪ್ರೊ. ಶಶಿಕಿರಣ, ನೇತ್ರಾವತಿ ಕಮ್ಮಾರ, ಸ್ಪೂರ್ತಿ ಆನೆಗುಂದಿ, ಪ್ರೊ ನಾಗರಾಜ ಗವಿಯಪ್ಪನವರ, ಚನ್ನಬಸಪ್ಪ ಗುದ್ಲಿ, ಭೋಧಕ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 