ವಿದ್ಯಾರ್ಥಿಗಳು ಶಾಲೆಗಳಲ್ಲಿ ವೇದಿಕೆ ಬಳಸಿಕೊಂಡು ತಮ್ಮ ಪ್ರತಿಭೆ ಹೊರಹಾಕಿ : ದುಂಡಿಗೌಡ್ರ
Students should use the platform in schools to showcase their talent: Dundigowdra
ಶಿಗ್ಗಾವಿ 14 : ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಿಗುವಂತಹ ವೇದಿಕೆಯನ್ನು ಬಳಸಿಕೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ ತಮ್ಮ ಮುಂದಿನ ಜೀವನದ ದಾರಿಯನ್ನು ಸುಗಮಗೊಳಿಸಿಕೊಳ್ಳಬೇಕೆಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ತಾಲೂಕಿನ ದುಂಡಸಿ ಗ್ರಾಮದ ಶ್ರೀ ಗಾಯತ್ರಿ ಕಾನ್ವೆಂಟ್ ಶಾಲೆಯಲ್ಲಿ ನಡೆದ ಸಮೂಹ ಸಂಪನ್ಮೂಲ ಕೇಂದ್ರದ, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಸೋಲು ಗೆಲುವನ್ನು ಪರಿಗಣಿಸದೆ, ಆತ್ಮವಿಶ್ವಾಸದಿಂದ ಸ್ಪರ್ಧೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಹೇಳಿದರು.
ಸಾಹಿತಿ ಶಿವಾನಂದ ಮ್ಯಾಗೇರಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಒಂದು ನವೀನ ಕಾರ್ಯಕ್ರಮವಾಗಿದ್ದು, ಶಿಕ್ಷಣದ ಜೊತೆಗೆ ನಡೆಯುವ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಹೊಸೂರ ಗ್ರಾಮ ಪಂಚಾಯತ ಅಧ್ಯಕ್ಷೆ ರಾಜೇಶ್ವರಿ ಲಮಾಣಿ, ಎನ್ ಬಿ ಕುಲಕರ್ಣಿ, ನರಹರಿ ಕಟ್ಟಿ, ನಾಗರಾಜ ಸೊರಗೊಂಡ, ಅಜ್ಜಪ್ಪ ಲಮಾಣಿ, ವೀರನಗೌಡ ಪಾಟೀಲ, ಅಣ್ಣಪ್ಪ ಲಮಾಣಿ, ಶಿವನಗೌಡ ಪಾಟೀಲ, ಮಹಾವೀರ ಧಾರವಾಡ ಹಾಗೂ ವಿವಿಧ ಶಾಲೆಗಳ ಶಿಕ್ಷಕ,ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಗ್ರಾಮಸ್ಥರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 