ವಿದ್ಯಾರ್ಥಿಗಳು ಕಷ್ಟಪಟ್ಟು ಮುಂದೆ ಬರಬೇಕು: ಡಾ. ಅಲ್ಲಮಪ್ರಭುಶ್ರೀ
Students should work hard and come forward: Dr. Allama Prabhushree
ಬೆಳಗಾವಿ 18: ನಗರದ ಪ್ರತಿಷ್ಠಿತ ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯಲ್ಲಿ ಡಾ. ಅಲ್ಲಮ ಪ್ರಭು ಮಹಾಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ನೆರವೇರಿತು. ಕಾರ್ಯಕ್ರಮ ಉದ್ದೇಶಿಸಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ನಮ್ಮ ಸಂಸ್ಥೆಗೆ ಕಮಲಾ ಬಾಳೆಕುಂದ್ರಿಯವರ ಕೊಡುಗೆ ಅಪಾರವಾಗಿದೆ. ಪ್ರಚಲಿತ ದಿನಗಳಲ್ಲಿ ತಾಂತ್ರಿಕವಾಗಿ ಜಗತ್ತು ಬದಲಾಗುತ್ತಿದೆ. ಅದರಂತೆ ವಿದ್ಯಾರ್ಥಿಗಳು ಕಷ್ಟ ಪಟ್ಟು ಮುಂದೆ ಬರಬೇಕಾಗಿದೆ. ಲಿಂಗಾಯತ ಗ್ರಂಥಾಲಯಕ್ಕೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತು. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬೇಕೆಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಕಿರಣಕುಮಾರ ಸವಣೂರ ಗ್ರಂಥಾಲಯದ ವಿವಿಧ ಆಯಾಮಗಳ ಬಗ್ಗೆ ಮಾತನಾಡಿದರು.
ಚೆರ್‌ಮನ್ ಎಫ್ ವಿ ಮಾನ್ವಿ, ಪ್ರಾಂಶುಪಾಲ ಡಾ. ಬಿ. ಆರ್. ಪಟಗುಂಡಿ, ಗ್ರಂಥಪಾಲಕ ನಳಿನಿ ಅಂಬಲಿ, ಸಹಾಯಕ ಗ್ರಂಥ ಪಾಲಕ ಯಲ್ಲಪ್ಪ ಮಡಿವಾಳರ, ವಿಠ್ಠಲ ಕುರುಬರ, ಶಶಿಕಲಾ ಹೊಸಮಠ ಮತ್ತು ವಿದ್ಯಾಲಯದ ವಿವಿಧ ವಿಭಾಗದ ಮುಖ್ಯ ಪ್ರಾಧ್ಯಾಪಕರು, ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 