ಗದಗದಲ್ಲಿ ‘ಖೇಲೋ ಇಂಡಿಯಾ’ ಕಾರ್ಯಕ್ರಮ ವೀಕ್ಷಿಸಿದ ವಿದ್ಯಾರ್ಥಿಗಳು
Students watched the ‘Khelo India’ programme in Gadag
ಗದಗ, 27: ಏಐಇ ಸೊಸೈಟಿಯ ಆರ್ಟ್ಸ ಅಂಡ್ ಕಾಮರ್ಸ್ ಕಾಲೇಜು, ಗದಗದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಕಾರ್ಯಕ್ರಮದ ನೇರ ಪ್ರಸಾರವನ್ನು ಆ. 27ರಂದು ಘಜಛಇಥ ವೇದಿಕೆಯ ಮೂಲಕ ಆಯೋಜಿಸಲಾಗಿತ್ತು.
ಕ್ರೀಡೆಯನ್ನು ಕೇವಲ ಮನರಂಜನೆ ಅಥವಾ ಪಠ್ಯೇತರ ಚಟುವಟಿಕೆಯಾಗಿ ನೋಡದೆ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿ ಸ್ವೀಕರಿಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಂವಾದದ ಮೂಲಕ ಯುವಜನತೆಗೆ ಕ್ರೀಡೆ ಹಾಗೂ ದೈಹಿಕ ಚಟುವಟಿಕೆಗಳ ಮಹತ್ವವನ್ನು ತಿಳಿಸಿದರು. ನಿಯಮಿತ ದೈಹಿಕ ಚಟುವಟಿಕೆಯು ಆರೋಗ್ಯ, ಶಿಸ್ತು, ಆತ್ಮವಿಶ್ವಾಸ, ಮಾನಸಿಕ ನೆಮ್ಮದಿ ಹಾಗೂ ಸಕಾರಾತ್ಮಕ ಚಿಂತನೆಗೆ ಸಹಕಾರಿಯಾಗಿದೆ. ಆರೋಗ್ಯಕರ ಸಮಾಜ ಹಾಗೂ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಆರೋಗ್ಯವಂತ ಯುವಜನತೆಯ ಪಾತ್ರ ಮಹತ್ವದ್ದಾಗಿದೆ ಎಂಬ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎ.ಕೆ. ಮಠ, ಓಖಖ ಕಾರ್ಯಕ್ರಮಾಧಿಕಾರಿ ಡಾ. ರಾಮಚಂದ್ರ ಪಡೇಸೂರ, ಪ್ರೊ. ವೀಣಾ ತಿರ್ಲಾಪುರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಧಾನಮಂತ್ರಿಯವರ ಸಂವಾದವನ್ನು ನೇರ ಪ್ರಸಾರದ ಮೂಲಕ ವೀಕ್ಷಿಸಿದರು. ಗದಗ ಆಕಾಶವಾಣಿಯ ಶ್ರೀ ಶಶಿಕಾಂತ ಕುಲಕರ್ಣಿ ಅವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
‘ಖೇಲೋ ಇಂಡಿಯಾ’ದಂತಹ ಕಾರ್ಯಕ್ರಮಗಳು ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವುದರ ಜೊತೆಗೆ ಪ್ರತಿದಿನದ ಜೀವನದಲ್ಲಿ ದೈಹಿಕ ಚಟುವಟಿಕೆಗೆ ಆದ್ಯತೆ ನೀಡುವಂತೆ ಪ್ರೇರೇಪಿಸುತ್ತವೆ. ‘ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು’ ಎಂಬ ಆಶಯದೊಂದಿಗೆ ಕ್ರೀಡೆಯನ್ನು ಜೀವನಶೈಲಿಯ ಭಾಗವನ್ನಾಗಿ ಮಾಡಿಕೊಳ್ಳುವ ಅಗತ್ಯವನ್ನು ಕಾರ್ಯಕ್ರಮ ಒತ್ತಿಹೇಳಿತು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯ, ದೈಹಿಕ ಸದೃಢತೆ, ಮಾನಸಿಕ ಕ್ಷೇಮ ಹಾಗೂ ಸಕ್ರಿಯ ಜೀವನಶೈಲಿಯ ಮಹತ್ವದ ಕುರಿತು ಅರಿವು ಮೂಡಿಸುವಲ್ಲಿ ಪ್ರೇರಣಾದಾಯಕವಾಗಿದ್ದು, ರಾಷ್ಟ್ರೀಯ ಸೇವಾ ಯೋಜನೆಯ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಆಶಯಗಳಿಗೆ ಪೂರಕವಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 