ಸಿಂದಗಿ 09: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಅಡಿ ನಡೆಯುವ ಸಿಂದಗಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯವು 2024-23ನೆಯ ಸಾಲಿನ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯ ಕೊಡ ಮಾಡುವ ಐದು ರಾ್ಯಂಕಗಳಲ್ಲಿ ಬಿ.ಎಸ್.ಡಬ್ಲ್ಯೂ ವಿಭಾಗದ ವಿದ್ಯಾರ್ಥಿನಿಯರಾದ ಐಶ್ವರ್ಯ ತಮದೊಡ್ಡಿ ರಾಜ್ಯಕ್ಕೆ ಮೂರನೆಯ ರಾ್ಯಂಕ್, ವಿದ್ಯಾಶ್ರೀ ಪಡಶೆಟ್ಟಿ ನಾಲ್ಕನೆಯ ರಾ್ಯಂಕ್ ಪಡೆದುಕೊಂಡು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿದ್ಯಾರ್ಥಿನಿಯರ ಕಠಿಣ ಪರಿಶ್ರಮ, ಕಾಲೇಜಿನ ಉಪನ್ಯಾಸಕರ ಅತ್ಯುತ್ತಮ ಭೋಧನೆ ಇಷ್ಟೊಂದು ರಾ್ಯಂಕ್ಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಶ್ರೀಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮನ್‌ರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಪ್ರತಿಕ್ರಿಯಿಸಿ, ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯರು ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.