ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ Students who scored the highest marks in the SSLC examination were felicitated.

ದೇವರಹಿಪ್ಪರಗಿ 28 :  ಶಿಕ್ಷಕರ ಮಾರ್ಗದರ್ಶನ ಮತ್ತು ಪೋಷಕರ ಪ್ರೋತ್ಸಾಹವು ಮಕ್ಕಳಿಗೆ ಉನ್ನತ ಸಾಧನೆ ಮಾಡಲು ಶಕ್ತಿಯನ್ನು ನೀಡುತ್ತದೆ ಎಂದು ಮುಖಂಡರಾದ ಶಂಕರಗೌಡ ಪಾಟೀಲ ಹೇಳಿದರು.ಪಟ್ಟಣದ ಸಮೀಪವಿರುವ ಜ್ಞಾನಜ್ಯೋತಿ ಸಂಸ್ಥೆಯ ಪ್ರಿನ್ಸ್‌ ಪಬ್ಲಿಕ್ ಪ್ರೌಢಶಾಲೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಪೋಷಕರು ಹಾಗೂ ಶಿಕ್ಷಕರು ಹೆಮ್ಮೆ ಪಡುವ ಸಾಧನೆ ಮಾಡಿದ ಎಲ್ಲರಿಗೂ ಅಭಿನಂದನೆಗಳು.ಉನ್ನತ ವಿದ್ಯಾಭ್ಯಾಸಗಳನ್ನು ಮಾಡಿ ಜನಸೇವೆ ಮಾಡಬೇಕು ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷರಾದ ಎನ್‌.ಬಿ.ಪಾಟೀಲ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, 10ನೇ ತರಗತಿ ಪರೀಕ್ಷೆ ಒಂದು ಪ್ರಮುಖ ಹೆಜ್ಜೆಯಾಗಿದ್ದು, ಇದು ನಿಮ್ಮ ಶೈಕ್ಷಣಿಕ ಜೀವನದಲ್ಲಿ ದೊಡ್ಡ ಮೈಲಿಗಲ್ಲು. ಈ ಯಶಸ್ಸು ನಿಮ್ಮ ಭವಿಷ್ಯದ ಕನಸುಗಳಿಗೆ ಒಂದು ದೃಢವಾದ ಅಭಿಪ್ರಾಯವನ್ನು ಹಾಕುತ್ತದೆ. ಮುಂದಿನ ದಿನಗಳಲ್ಲಿ ಉತ್ತಮ ಅವಕಾಶಗಳು ನಿಮ್ಮನ್ನು ಕಾಯುತ್ತಿವೆ. ಯಾವಾಗಲೂ ನಿಮ್ಮ ಗುರಿಗಳನ್ನು ಎತ್ತರದಲ್ಲಿ ಇರಿಸಿಕೊಳ್ಳಿ, ಕಲಿಕೆಯನ್ನು ಎಂದಿಗೂ ನಿಲ್ಲಿಸಬೇಡಿ ಎಂದರು.ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.