ಬೆಳಗಾವಿ ವಿಭಾಗ ನೌಕರರ ವೃದ್ಧಾಶ್ರಮ ಮತ್ತು ಮಹಿಳಾ ಕಲ್ಯಾಣ ಸಂಸ್ಥೆಗೆ ಅಧ್ಯಯನ ತಂಡ ಭೇಟಿ
Study team visits Belgaum Division Employees' Old Age Home and Women's Welfare Institute
ಬೆಳಗಾವಿ 17: ಮೈಸೂರು ಆಡಳಿತ ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ತರಬೇತಿ ಕೇಂದ್ರದ ಸಹಯೋಗದಲ್ಲಿ ಬೆಳಗಾವಿ ವಿಭಾಗ ಮಟ್ಟದ ನೌಕರರು ನಗರದಲ್ಲಿನ ಮಹಿಳಾ ಕಲ್ಯಾಣ ಸಂಸ್ಥೆ ಮತ್ತು ನಾಗನೂರಿನ ಶ್ರೀ ಶಿವ ಬಸವೇಶ್ವರ ಟ್ರಸ್ಟ್ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಚಟುವಟಿಕೆಗಳ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಎಟಿಐ ಸಂಸ್ಥೆಯ ಅಧ್ಯಾಪಕಿ ಶ್ರೀಮತಿ ಸಂಧ್ಯಾ ಮಾತನಾಡಿ, “ಸ್ವಯಂಸೇವಾ ಸಂಸ್ಥೆಗಳು ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುತ್ತಿವೆ. ಸಮಾಜಮುಖಿ ಕಾರ್ಯಗಳಲ್ಲಿ ಎಲ್ಲರೂ ಕೈಜೋಡಿಸಬೇಕು” ಎಂದು ಕರೆ ನೀಡಿದರು.
ಅದೇ ಸಂದರ್ಭದಲ್ಲಿ ಯೋಜನೆ ನಿರ್ದೇಶಕಿ ಸುರೇಖಾ ಪಾಟೀಲ್ ಮಾತನಾಡಿ, “ಸರಕಾರಿ ಮತ್ತು ಸ್ವಯಂಸೇವಾ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಸಮಾಜದ ಸಮಗ್ರ ಪ್ರಗತಿ ಸಾಧ್ಯ” ಎಂದರು.
ವೃದ್ಧಾಶ್ರಮದ ಕಾರ್ಯಚಟುವಟಿಕೆಗಳನ್ನು ನೌಕರರಿಗೆ ಪರಿಚಯಿಸಲಾಯಿತು. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ವಿವಿಧ ಇಲಾಖೆಗಳ ನೌಕರರು ಈ ಭೇಟಿಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಕು. ಪೂರ್ಣಿಮಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂತಿಮವಾಗಿ ಕು. ಯಮುನಾ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 