ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಭಿವೃದ್ಧಿ ಕುಂಠಿತ: ಐಹೊಳೆ
Stunned development in the name of guarantee scheme: Aihole
ಚಿಕ್ಕೋಡಿ 02: ಕಳೆದ 17 ವರ್ಷಗಳಿಂದ ರಾಯಬಾಗ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಳೆ ಹರಿಸಲಾಗಿದೆ. ಕ್ಷೇತ್ರದ ಹದಗೆಟ್ಟಿರುವ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.
ರಾಯಬಾಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬೆಳಕೂಡ, ನಾಗರಮುನ್ನೊಳ್ಳಿ ಗ್ರಾಮದಲ್ಲಿ ಎಸ್‌ಇಪಿಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷೇತ್ರದ ಬೆಳಕೂಡ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತದೆ. ಅದರಂತೆ ನಾಗರಮುನ್ನೋಳ್ಳಿ ನಾಗಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ ಅನುದಾನ ನೀಡಲಾಗಿದೆ. ನಾಗರಮುನೋಳ್ಳಿಯ ಪರಿಶಿಷ್ಠ ಜಾತಿ ಕಾಲೋನಿಯಲ್ಲಿ 30 ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಕಾಂಗ್ರೆಸ್ ಶಾಸಕರಿಗೆ ಸಮರ್ಕ ಅನುದಾನ ನೀಡುತ್ತಿಲ್ಲ, ಬಿಜೆಪಿ ಶಾಸಕರಿಗೆ ವಿಶೇಷ ಅನುದಾನ ಸಿಗುತ್ತಿಲ್ಲ, ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಇದರಿಂದ ರಾಜ್ಯದ ಶಾಸಕರು ಸರ್ಕಾರದ ಮೇಲೆ ಅಸಮಾಧಾನ ಹೊರಹಕುತ್ತಿದ್ದಾರೆ. ಗ್ಯಾರಂಟಿ ಯೋಜನೆ ಸಮರ್ಕ ಮುಟ್ಟಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ನಾಗರಮುನ್ನೋಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಅನುಕೂಲವಾಗುವ ಕರಗಾಂವ ಏತ ನೀರಾವರಿ ಯೋಜನೆಗೆ ಶೀಘ್ರದಲ್ಲಿ ಚಾಲನೆ ಕೊಡಲಾಗುತ್ತದೆ. ಕಾಮಗಾರಿ ಆರಂಭವಾದ ಎರಡೆ ವರ್ಷದಲ್ಲಿ ರೈತರಿಗೆ ನೀರು ಹೋಗುತ್ತದೆಂಬ ಭರವಸೆ ಇದೆ. ಸಮರ್ಕ ನೀರು ಕೊಡಬೇಕೆಂದು ನೀರಾವರಿ ಇಲಾಖೆ ಅಧಿಕರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬೆಳಕೂಡ ಗ್ರಾಮದ ನಿವೃತ್ತ ಶಿಕ್ಷಕ ಚಂದ್ರಶೇಖರ ಅರಭಾವಿ, ಬಸವಣ್ಣಿ ಕುಂಬಾರ, ಸಂಭಾ ಚವ್ಹಾಣ, ಮಹಾದೇವ ಬೆಳಕೂಡೆ, ಮಹಾಂತೇಶ ಯಶವಂತ, ನಟರಾಜ ಹಿರೇಮಠ, ಮಹಾಂತೇಶ ಚವ್ಹಾಣ, ಬಾಳಪ್ಪ ತಳವಾರ, ಬಸವರಾಜ ಫರಾಳೆ, ಈರ್ಪ ಡೋಣವಾಡೆ, ದೇವರಾಜ ಪಶ್ಚಾಪೂರೆ, ನಾಗರಮುನ್ನೋಳ್ಳಿ ಗ್ರಾಮದ ಎಂ.ಬಿ.ಆಲೂರೆ, ಡಾ,ಅರುಣ ಮರಾ್ಯಯಿ, ರಮೇಶ ಕಾಳನ್ನವರ, ಭರಮಣ್ಣಾ ಯಾದಗೂಡೆ, ಮನೋಜ ಮನಗೂಳಿ, ಅಶೋಕ ಪಾಗದ, ಸದಗೌಡ ಪಾಟೀಲ, ಕಲ್ಲಪ್ಪ ಪಾಶ್ಚಾಪೂರೆ, ವಿರೂಪಾಕ್ಷಿ ಈಟಿ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 