ದೇಶಕ್ಕೆ ಸುಭಾಷ್ ಚಂದ್ರ ಬೋಸ್ ಕೊಡುಗೆ ಅಪಾರ : ಪ್ರಧಾನಿ ಮೋದಿ
ಕೋಲ್ಕತಾ/ನವದೆಹಲಿ, ಜ 23, ದೇಶಾದ್ಯಂತ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು" ಎಂದು ಬರೆದಿದ್ದಾರೆ. ಈ ಮಗ ಒಬ್ಬ ಧೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದರು. ಅವರು, ತಮ್ಮ ಜೀವನವನ್ನು ಒಂದು ಭಾರತದ ಸ್ವಾತಂತ್ರ್ಯವೆಂಬ ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟರು ಎಂದಿರುವ ಮೋದಿ, ನೇತಾಜಿಯವರ ಜಯಂತಿಯನ್ನು ಹೆಮ್ಮೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ. ಬೋಸ್ ಜನ್ಮದ ದಿನದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕರ ರಾಜ್ಯಾದ್ಯಂತ ‘ಸುಭಾಷ್ ಉತ್ಸವ’ ಆಯೋಜಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟ್ವಿಟರ್ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 