ನವಕಾರ ನವಯುವಕ ಮಂಡಲದಿಂದ ಸುಭಾಷ್ ಡಂಕ್ಗೆ ಆತ್ಮೀಯ ಸನ್ಮಾನ
Subhash Dunk receives warm tribute from Navkar Navyuvaka Mandal
ಹುಬ್ಬಳ್ಳಿ 31: ನವಕಾರ ನವಯುವಕ ಮಂಡಲ, ಹುಬ್ಬಳ್ಳಿಯವರು ಸಮಾಜಸೇವೆಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಭಾರತ ಜೈನ್ ಮಹಾಮಂಡಲದ ಅಧ್ಯಕ್ಷರಾದ ಸುಭಾಷ್ ಡಂಕ್ ಅವರನ್ನು ಶಾಲು ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಮಂಡಲದ ಅಧ್ಯಕ್ಷರಾದ ಗೌರವ್ ಬಡೋಲಾ ಮಾತನಾಡಿ, ಸುಭಾಷ್ ಡಂಕ್ಶಿಕ್ಷಣ, ಆರೋಗ್ಯ, ಸಮಾಜಸೇವೆ ಹಾಗೂ ಯುವ ಚಟುವಟಿಕೆಗಳ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಅವರ ಕೊಡುಗೆ ಅತ್ಯಂತ ಪ್ರೇರಣಾದಾಯಕವಾಗಿದೆ ಎಂದರು. ಈ ಸಂದರ್ಭದಲ್ಲಿ ಮಹಾವೀರ ಡಂಕ್, ಬಿಜೆಪಿ ಮುಖಂಡ ಅಭಿಷೇಕ್ ಮೆಹತಾ ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಈ ಆತ್ಮೀಯ ಗೌರವಕ್ಕೆ ಸುಭಾಷ್ ಡಂಕ್ ಅವರು ನವಕಾರ ನವಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 