ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕಕ್ಕೆ ಅಸ್ತು
ನವದೆಹಲಿ 25: ಮದ್ಯದ ದೊರೆ ವಿಜಯ್ ಮಲ್ಯ ಹಾಗೂ ಉದ್ಯಮಿ ನೀರವ್ ಮೋದಿಯಂತಹ ದೊಡ್ಡ ಆಥರ್ಿಕ ಅಪರಾಧಿಗಳನ್ನು ಮಟ್ಟಹಾಕುವ ದೇಶಭ್ರಷ್ಟ ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕ 2018ಕ್ಕೆ ಬುಧವಾರ ರಾಜ್ಯಸಭೆ ಅಂಗೀಕಾರ ನೀಡಿದೆ. ಜುಲೈ 19ರಂದು ಲೋಕಸಭೆಯಲ್ಲಿ ಪಾಸ್ ಆಗಿದ್ದ ದೇಶಭ್ರಷ್ಟ ಆಥರ್ಿಕ ಅಪರಾಧ ನಿಯಂತ್ರಣ ವಿಧೇಯಕವನ್ನು ಇಂದು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಇತ್ತೀಚಿಗೆ ಆಥರ್ಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಸದ್ಯದ ಕಾನೂನಿಂದ ಅದನ್ನು ತಡೆಯಲು ಸಾಧ್ಯವಿಲ್ಲ. ಹೀಗಾಗಿ ಹೊಸ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಹಣಕಾಸು ಸಚಿವ ಪಿಯೂಶ್ ಗೋಯಲ್ ಅವರು ಹೇಳಿದ್ದಾರೆ.
ಪ್ರಸ್ತುತ ಅಪರಾಧ ಕಾನೂನು ಆಥರ್ಿಕ ಅಪರಾಧಿಗಳ ಆಸ್ತಿ ಜಪ್ತಿ ಮಾಡಲು ಸಾಧ್ಯವಿಲ್ಲ. ಈ ವಿಧೇಯಕ ಆಸ್ತಿ ಮತ್ತು ಸಂಪತ್ತನ್ನು ಜಪ್ತಿ ಮಾಡುವ ಅಧಿಕಾರ ನೀಡುತ್ತದೆ ಎಂದಿದ್ದಾರೆ.
ಆಥರ್ಿಕ ಅಪರಾಧ ಎಸಗಿ ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಗೋಯಲ್ ಹೇಳಿದ್ದಾರೆ.
ಈ ಹೊಸ ಕಾನೂನಿನಡಿ ಜಾರಿ ನಿದರ್ೆಶನಾಲಯ ಆಥರ್ಿಕ ಅಪರಾಧಗಳ ತನಿಖೆ ನಡೆಸಲಿದ್ದು, ತನಿಖಾ ಸಂಸ್ಥೆಗೆ ಹೆಚ್ಚಿನ ಅಧಿಕಾರ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 