ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಿ : ಜಿಲ್ಲಾಧಿಕಾರಿ
Submit a new proposal for the construction of a new theatre: Deputy Commissioner
ಲೋಕದರ್ಶನ ವರದಿ
ಕಾರವಾರ 03 : ಕಾರವಾರದಲ್ಲಿ ಕಲಾತ್ಮಕ ಮತ್ತು ಆಕರ್ಷಕವಾದ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ 3 ವರ್ಷಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆ ಕುರಿತಂತೆ ಇದುವರೆಗೂ ಯಾವುದೇ ಉತ್ತರ ಬಂದಿಲ್ಲವಾಗಿದ್ದು, ಪ್ರಸ್ತುತ ಕಟ್ಟಡ ನಿರ್ಮಾಣ ದರಗಳು ಕೂಡಾ ಪರಿಷ್ಕೃತಗೊಂಡಿರುವುದರಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಹೊಸದಾಗಿ ಅಂದಾಜು ಪಟ್ಟಿಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ ಅವರು ಹೊಸ ರಂಗಮಂದಿರ ನಿರ್ಮಾಣಕ್ಕೆ ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ 20 ಗುಂಟೆ ಜಾಗವನ್ನು ಗುರುತಿಸಲಾಗಿದ್ದು, ಇದನ್ನು ರಂಗಮಂದಿರ ನಿರ್ಮಾಣಕ್ಕೆ ಮೀಸಲಿಡುವ ಕುರಿತಂತೆ ದಾಖಲೆಗಳನ್ನು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಿ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ನೂತನ ರಂಗಮಂದಿರವನ್ನು ಎಲ್ಲಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಮಿಸಬೇಕು,
ಇದರಲ್ಲಿ ಆರ್ಟ್ ಗ್ಯಾಲರಿ, ಗ್ರಂಥಾಲಯ, ಉತ್ತಮ ರೀತಿಯ ಧ್ವನಿ ಬೆಳಕು, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳಿರಬೇಕು ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ತಹಸೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಜಗದೀಶ ಹುಲಗಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಾನಾಯ್ಕ ಹಾಗೂ ಲೋಕೋಪಯೋಗಿ ಮತ್ತು ಪಂ.ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 