ಪ್ರಗತಿ ಮಾಹಿತಿಯನ್ನು ತಪ್ಪದೇ ಸಲ್ಲಿಸಿ : ರಾಮಚಂದ್ರನ್ ಆರ್.
ಬೆಳಗಾವಿ 16: ಕಳೆದ ಮೂರ ತಿಂಗಳಿನಿಂದ ಡಿ.ಎಸ್.ಎಸ್ ಪೋರ್ಟಲ್ನ್ನು ರಾಜ್ಯ ಸರಕಾರ ಜಾರಿಗೆ ತಂದಿದ್ದು ಈ ಪೋರ್ಟಲ್ನಲಿ ಎಲ್ಲಾ ಇಲಾಖೆಗಳು ಪ್ರತಿ ತಿಂಗಳು ಸಂಪೂರ್ಣ ಪ್ರಗತಿ ಮಾಹಿತಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿವರ್ಾಹಕ ಅಧಿಕಾರಿ ರಾಮಚಂದ್ರನ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರೀಶಿಲನೆ ನಡೆಸಿ ಮಾತನಾಡಿದರು.
ಶುದ್ದ ಕುಡಿಯುವ ನೀರಿನ ಘಟಕಗಳು ಕಾರ್ಯವಿರ್ವಹಿಸುವಲ್ಲಿ ವಿಫಲವಾಗಿದ್ದು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಗಮನ ನೀಡಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಗದಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸುತ್ತಿಲ್ಲ ಅಧಿಕಾರಿಗಳು ಒತ್ತು ಕೊಟ್ಟು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಸಾರ್ವಜನಿಕರು ಈಗಾಗಲೇ ನಿಮರ್ಿಸಿಕೊಂಡಿರುವ ಶೌಚಾಲಯಗಳಿಗೆ ಆಕರ್ಷಕವಾಗಿ ಕಾಣುವ ಬಣ್ಣಗಳಿಂದ ಸ್ವಚ್ಛ ಭಾರತ ಚಿಹ್ನೆ ಮತ್ತು ಸಂದೇಶ ನೀಡುವ ಮಾಹಿತಿಯನ್ನು ಶೌಚಾಲಯಗಳ ಮೇಲೆ ಬಿಡಿಸಿ, ಶೌಚಾಲಯದ ಭಾವಚಿತ್ರವನ್ನು ಪೋರ್ಟಲ್ಗೆ ಅಪ್ಲೋಡ್ ಮಾಡಿದರೆ. ಅಂತಹ ಫಲಾನುಭವಿಗಳಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಮಾಹಿತಿ ನೀಡಿ ಶುದ್ದ ಕುಡಿಯುವ ನೀರಿನ ಘಟಕ ಹಂತ-2 ರಲ್ಲಿ 47 ಕಾಮಗಾರಿಗಳು ಪ್ರಗತಿಯಲ್ಲಿದ್ದು 16 ಕಾಮಗಾರಿಗಳಿಗೆ ಮರು ಟೆಂಡರ ಕರೆಯಲಾಗಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರು ಮಾತನಾಡಿ ಕಾರ್ಯನಿರ್ವಹಿಸುತ್ತಿರುವ ಐ.ಸಿ.ಡಿ.ಎಸ್ ಬ್ಲಾಕಗಳು, ಅಂಗನವಾಡಿಗಳು, ಮಿನಿ ಅಂಗನವಾಡಿ ಸಂಖ್ಯೆ ಮತ್ತು ಅಪೌಷ್ಠಿಕ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಕ್ಕಳ ಲಸಿಕಾ ಕಾರ್ಯಕ್ರಮದಲ್ಲಿ ಡಿಸೆಂಬರ ಮಾಹೆಯಲ್ಲಿ ಗಬರ್ಿಣಿ ಸ್ತ್ರೀಯರಿಗೆ ಟಿ.ಟಿ ಲಸಿಕೆ 8588, ಬಿಸಿಜಿ 7276, ಪೋಲಿಯೋ 7495,ಎಮ್ ಆರ್ 1 7553, ಹೆಪಟೈಟೀಸ್-ಬಿ 5560, ಫೇಂಟಾ 7495 ನೀಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 