ಅಸಮತೋಲನ ನಿವಾರಣೆ ಸೂಚ್ಯಂಕ ಆಧರಿಸಿ ಸರ್ಕಾರಕ್ಕೆ ವರದಿ ಸಲ್ಲಿಕೆ: ಪ್ರೊ.ಎಂ.ಗೋವಿಂದರಾವ್
Submitting a report to the government based on the Imbalance Elimination Index: Prof. M. Govinda Rao
ವಿಜಯನಗರ(ಹೊಸಪೇಟೆ) 19 : ಜಿಲ್ಲೆಯಲ್ಲಿ ಯಾವ ರೀತಿಯ ಬದಲಾವಣೆ ಅಗತ್ಯವಿದೆ. ಅಭಿವೃದ್ಧಿ ಸೇರಿ ವಿವಿಧ ವಲಯಗಳ ಸೂಚ್ಯಂಕ ಆಧರಿಸಿ ಗುರುತಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷರಾದ ಪ್ರೊ.ಎಂ. ಗೋವಿಂದರಾವ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಏರಿ್ಡಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು,
ಡಾ.ಡಿ.ಎಂ.ನಂಜುಂಡಪ್ಪರವರ 2002ರ ವರದಿಯಲ್ಲಿ ಅಂದಿನ 176 ತಾಲೂಕುಗಳನ್ನು ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅಭಿವೃದ್ದಿ ಹೊಂದಿದ ತಾಲೂಕುಗಳೆಂದು 4 ವರ್ಗದಲ್ಲಿ ವರ್ಗೀಕರಿಸಿ ಅದಕ್ಕನುಗುಣವಾಗಿ ಅನುದಾನ ಹಂಚಿಕೆಗೆ ಶಿಫಾರಸ್ಸು ಮಾಡಿದ್ದರು. ಇದರ ಅನ್ವಯ ಗುರುತಿಸಲಾದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ 31 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಅಸಮತೋಲನ ಹೆಚ್ಚಾದಾಗ ಪ್ರದೇಶಗಳು ಹಿಂದುಳಿಯಲಿವೆ. ನಂಜುಂಡಪ್ಪ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ಗುರುತಿಸಲಾಗುತ್ತದೆ. ನಿಜಕ್ಕೂ ಹಿಂದುಳಿದಿದ್ದರೇ, ಯಾವ ಕಾರಣಕ್ಕಾಗಿ ಯಾವ ಕ್ಷೇತ್ರದಲ್ಲಿ ಹಿಂದುಳಿದಿದೆ ಎಂಬುದನ್ನು ಸಮಿತಿಯು ಪರಾಮರ್ಶಿಸಲಿದೆ. ತಲಾ ಆದಾಯ, ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರೀಶೀಲಿಸಲಿದೆ. ರಾಜ್ಯ ಸರ್ಕಾರ 2024 ಸೆಪ್ಟಂಬರ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗಧಿಪಡಿಸಲಿದೆ. ಬಳಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ ಹಾಗೂ ಜಿಲ್ಲೆಯ ಸವಾಂರ್ಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಕೂಡ್ಲಿಗಿ ಕ್ಷೇತ್ರದಲ್ಲಿ ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ನುರಿತ ಶಿಕ್ಷಕರ ನೇಮಕವಾಗಬೇಕಿದೆ. ಯುವಕ, ಯುವತಿಯರಿಗೆ ಕೌಶಲ್ಯ ಅಭಿವೃದ್ದಿ ತರಬೇತಿಗಳು ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕಿದೆ. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳು, ಅರಣ್ಯಧಾಮಗಳಿರುವುದರಿಂದ ಪ್ರವಾಸೋದ್ಯಮ ಅಭಿವೃದ್ದಿಗೆ ಆದ್ಯತೆ ನೀಡಬೇಕಿದೆ ಎಂದರು.
ಹರಪನಹಳ್ಳಿ ಶಾಸಕರಾದ ಲತಾ ಮಲ್ಲಿಕಾರ್ಜುನ್ ಮಾತನಾಡಿ, ಉದ್ಯೋಗಕ್ಕಾಗಿ ಬೇರೆ ಕಡೆ ಸ್ಥಳೀಯರು ಹೋಗುವುದನ್ನು ತಡೆಯಬೇಕಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗಿದೆ. ನಮ್ಮಲ್ಲಿ 38 ತಾಂಡಗಳಿವೆ. ತಾಂಡಗಳ ಅಭಿವೃದ್ದಿಯಾಗಬೇಕು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ಪರಿಹರಿಸಲು ಮುಂದಾಗಬೇಕು. ಉದ್ಯೋಗ ಸೃಷ್ಟಿ, ರೈತರಿಗೆ ನೆರವು, ಆರೋಗ್ಯ ಕ್ಷೇತ್ರದ ಸುಧಾರಣೆಯಾಗಬೇಕಿದೆ ಎಂದು ಸಮಿತಿಯ ಗಮನಕ್ಕೆ ತಂದರು.
ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಮಾತನಾಡಿ, ಜಿಲ್ಲೆಯ ಅರ್ಥಿಕ ಅಭಿವೃದ್ದಿಗೆ ಪ್ರವಾಸೋದ್ಯಮದ ಬಹಳ ಮುಖ್ಯವಾಗಿದೆ. ಪ್ರವಾಸಿತಾಣ ಹಂಪಿ ಸೇರಿ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸೇರಿ ವಿವಿಧ ಕಾರ್ಖನೆಗಳನ್ನು ಸ್ಥಾಪಿಸಬೇಕಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಉದ್ಯೋಗ ಸೃಷ್ಠಿ, ನೀರಾವರಿಗೆ ಗಮನಹರಿಸಬೇಕಿದೆ. ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳು, ವೈದಕೀಯ ಕಾಲೇಜು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ ನೀಡಬೇಕು. ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ, ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಪ್ರೋತ್ಸಾಹ, ಕೃಷಿ ಆಧಾರಿತ ಕೈಗಾರಿಕೆಗಳು, ರೇಷ್ಮೆ ಅಭಿವೃದ್ದಿ ಪುನಶ್ಚೇತನ ಕಾರ್ಯಗಳಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದರು.
ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಪ್ರೊ.ಡಾ.ಎಸ್.ಟಿ.ಬಾಗಲಕೋಟೆ, ಡಾ.ಸಂಗೀತಾ ಕಟ್ಟಿ ವೇದಿಕೆಯಲ್ಲಿದ್ದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಚಿದಾನಂದ್ ಪೂಜಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರನಾಯ್ಕ.ಎಲ್.ಆರ್, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ, ಶಿಕ್ಷಣ ಇಲಾಖೆ ಡಿಡಿಪಿಐ ವೆಂಕಟೇಶ್ ರಾಮಚಂದ್ರ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹೆಚ್.ವಿ.ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 