ಜಗದ್ಗುರು ತೋಂಟದಾರ್ಯ ಶಿಕ್ಷಣ ಸಂಸ್ಥೆಯಿಂದ ಕೊಡಗು ನೆರೆ ಸಂತ್ರಸ್ತ ಕುಟುಂಬದ ಮಕ್ಕಳ ಶಿಕ್ಷಣಕ್ಕಾಗಿ ಸಹಾಯಧನ

ಲೋಕದರ್ಶನ ವರದಿ

 ಗದಗ 12 : ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೊಡಗಿನಲ್ಲಿ ಸಂಭವಿಸಿದ ಅಪಾರ ಪ್ರಮಾಣದ ಪ್ರವಾಹ ಸಂತ್ರಸ್ತರ ಮಕ್ಕಳ ಶೈಕ್ಷಣಿಕ ಸಹಾಯಕ್ಕಾಗಿ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಶಿಕ್ಷಣ ಸಂಸ್ಥೆಗಳ ವಿದ್ಯಾಥರ್ಿಗಳು ಹಾಗೂ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಸಂಗ್ರಹಿಸಿದ ಎರಡನೇ ಕಂತಿನ ಹಣ ರೂಗಳ 1,68,000 ಮೊತ್ತವನ್ನು ಚೆಕ್ ಮತ್ತು ಡಿಡಿಗಳ ಮುಖಾಂತರ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಾಯಿತು.

                ತೋಂಟದಾರ್ಯ ವಿದ್ಯಾಪೀಠದ ಕಾರ್ಯದಶರ್ಿ ಎಸ್.ಎಸ್ ಪಟ್ಟಣಶೆಟ್ಟಿ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಶೇಖಣ್ಣ ಕವಳಿಕಾಯಿ, ಉಪಾಧ್ಯಕ್ಷ ಜಿ.ಪಿ ಕಟ್ಟಿಮನಿ, ಬಸವಕೇಂದ್ರದ ಅಧ್ಯಕ್ಷರಾದ ಕೆ.ಎಸ್ ಚಟ್ಟಿ, ಶಿವಾನುಭವ ಸಮಿತಿ ಚೇರಮನ್ನರಾದ ವಿವೇಕಾನಂದಗೌಡ ಪಾಟೀಲ, ಚೇಂಬರ್ ಆಫ್ ಕಾಮರ್ಸ ಉಪಾಧ್ಯಕ್ಷರಾದ ವೀರಣ್ಣ ಬೇವಿನಮರದ, ವಿರೂಪಾಕ್ಷಪ್ಪ ಬಳ್ಳೊಳ್ಳಿ, ಬಸವೇಶ್ವರ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವನಗೌಡ ಗೌಡರ, ತೋಂಟದಾರ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೊಟ್ರೇಶ ಮೆಣಸಿನಕಾಯಿ ಉಪಸ್ಥಿತರಿದ್ದರು