ಕೊಪ್ಪಳ 09: ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಮಟ್ಟದ ಕಲಾಶ್ರೀ ಶಿಬಿರ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
"ಜಿಲ್ಲಾ ಮಟ್ಟದ ಕಲಾಶ್ರೀ ಶಿಬಿರ" ಕಾರ್ಯಕ್ರಮವನ್ನು ಬೆಂಗಳೂರು ಬಾಲ ಭವನ ಸೊಸೈಟಿ, ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಸಕರ್ಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಇತ್ತಿಚೇಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಾದ ಉಮಾದೇವಿ ಸೊನ್ನದ ಅವರು ಮಾತನಾಡಿ, ಇಂದಿನ ಮಕ್ಕಳೇ ಈ ನಾಡಿನ ಮುಂದಿನ ಪ್ರಜೆಗಳು, ಮಕ್ಕಳಲ್ಲಿ ಪ್ರತಿಭೆಯನ್ನು ಗುರುತಿಸಲು ಬಾಲಭವನ ಸೊಸೈಟಿ ಬೆಂಗಳೂರು ಇವರು ಮಕ್ಕಳಿಗೆ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ ಮತ್ತು ವಿಜ್ಞಾನದಲ್ಲಿ ನೂತನ ಅವಿಷ್ಕಾರ ಸ್ಪಧರ್ೇಗಳನ್ನು ಏರ್ಪಡಿಸಲಾಗಿದೆ. ಮಕ್ಕಳು ಸ್ಪಧರ್ೆಯಲ್ಲಿ ತಾಲೂಕ ಮಟ್ಟದಲ್ಲಿ ಆಯ್ಕೆಯಾಗಿದ್ದು, ಜಿಲ್ಲಾ ಮಟ್ಟದಲ್ಲಿ ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲು ಇದೊಂದು ಉತ್ತಮವಾದ ಕಾರ್ಯವಾಗಿದೆ. ಸ್ಪಧರ್ೆಗಳಲ್ಲಿ ಮಕ್ಕಳು ಭಾಗವಹಿಸುವುದು ಅವರ ಹಕ್ಕಾಗಿದೆ ಎಂದುರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕರಾದ ಈರಣ್ಣಾ ಪಾಂಚಾಳ ಅವರು ಮಾತನಾಡಿ, ಬಾಲಭವನ ಸೊಸೈಟಿ ಬೆಂಗಳೂರು ಇವರು 2018ನೇ ಸಾಲಿನಲ್ಲಿ ಮಕ್ಕಳ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಕಲಾ ಉತ್ಸವವನ್ನು ಹಾಗೂ ಕಲಾಶ್ರೀ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಪ್ರತಿಭೆಯನ್ನು ಗುರುತಿಸುವುದಾಗಿದೆ ಹಾಗೂ ಮಕ್ಕಳಿಗೆ ಅವರ ಹಕ್ಕುಗಳನ್ನು ಒದಗಿಸಿಕೊಡುವುದಾಗಿದೆ ಮತ್ತು ಮಕ್ಕಳಿಗೆ ಆತ್ಮ ಸ್ಥೈರ್ಯ, ಭರವಸೆ, ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವುದಾಗಿದೆ ಎಂದು ಹೇಳಿದರು.
ಕಾಯರ್ಾಗಾರದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವೀರೇಂದ್ರ ನಾವದಗಿ, ಯುನಿಸೆಫ್ನ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಬಾಲನ್ಯಾಯ ಮಂಡಳಿಯ ಶೇಕರಗೌಡ ಜಿ. ರಾಮತ್ನಾಳ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಉಮಾದೇವಿ ಹಿರೇಮಠ, ಸಿಂಧು ಅಂಗಡಿ, ಹಾಗೂ ಜಯಶ್ರೀ ಆರ್., ಅಧೀಕ್ಷಕರಾದ ಶಿವಶರಣಪ್ಪ ಗದ್ದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ, ರವಿ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು ಮೆಹಬೂಬ ಕೊನೆಯಲ್ಲಿ ವಂದಿಸಿದರು. ಚಿತ್ರಕಲೆ, ನೃತ್ಯ, ಗೀತೆ, ಕವನ,ಕಥೆ, ವಿಜ್ಞಾನ ಪ್ರದರ್ಶನಗಳಲ್ಲಿ ಹಾಗೂ ವಿವಿಧ ಸ್ಪಧರ್ೆಗಳಲ್ಲಿ ಮಕ್ಕಳು ಭಾಗವಹಿಸಿದರು.