ಕೊಪ್ಪಳ: ಜಿಲ್ಲೆಯಲ್ಲಿ ನವೆಂಬರ್. 25ರಿಂದ ಡಿಸೆಂಬರ್. 10 ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ನಡೆಯಲಿದ್ದು ಇದಕ್ಕೆ ವಿವಿಧ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ-ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮದ ಕುರಿತು ಪತ್ರಿಕಾ ಪ್ರಕಟಣೆಗಳನ್ನು ಹೊರಡಿಸಿ. ಪಂಚಾಯತ್ ರಾಜ್ಯ ಇಲಾಖೆಯಿಂದ ಗ್ರಾಮದಲ್ಲಿ ಸಮಿತಿ ರಚಿಸಿ, ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ಡಂಗುರದ ಮೂಲಕ ಹಾಗೂ ನಗರಪ್ರದೇಶದಲ್ಲಿ ನಗರಸಭೆ ವಾಹನಗಳಲ್ಲಿ ಮೈಕ್ ಮೂಲಕ ಪ್ರಚಾರ ನೀಡಲು ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ವಿವಿಧ ಇಲಾಖೆ ಮತ್ತು ಸರಕಾರೇತರ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನದ ಜಿಲ್ಲಾ ಮಟ್ಟದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷಯ ರೋಗವು ನಮಗೆ ಅರಿವಿಲ್ಲದೇ ಗಂಭೀರ ಪರಿಣಾಮ ಉಂಟು ಮಾಡುವ ರೋಗವಾಗಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ದೀರ್ಘ ಕಾಲದ ಜ್ವರ, ಕೆಮ್ಮು, ಕಡಿಮೆ ಅವಧಿಯಲ್ಲಿ ಹೆಚ್ಚು ತೋಕ ಇಳಿಕೆ ಕ್ಷಯ ರೋಗದ ಲಕ್ಷಣಗಳಾಗಿದ್ದು, ಈ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಕ್ಷಯ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಘೋಷಣೆ ಕೂಗಬೇಕು ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗ್ರಾಮವಾರು ಅನಾಥ ಮಕ್ಕಳನ್ನು ಹಾಗೂ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಕ್ಷಯ ಪರೀಕ್ಷೆ ಮಾಡಿಸುವಲ್ಲಿ ಸಹಕಾರ ನೀಡಬೇಕು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಕಾಮರ್ಿಕರಿಗೆ ಹಾಗೂ ಸಿಬ್ಬಂದಿಯವರೆಗೆ ಕ್ಷಯ ಪರೀಕ್ಷೆ ಮಾಡಿಸಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ವಸತಿ ನಿಲಯದ ವಿದ್ಯಾಥರ್ಿಗಳನ್ನು, ಅನಾಥಶ್ರಮ, ವೃದ್ಧಾಶ್ರಮಗಳಲ್ಲಿ ವಾಸಿಸುತ್ತಿರುವವರಿಗೆ ಕ್ಷಯ ಪರೀಕ್ಷೆ ಮಾಡಿಸಬೇಕು. ಪೊಲೀಸ್ ಇಲಾಖೆಯಿಂದ ಸಂಚಾರಿ ಪೊಲೀಸ್ ಸಿಬ್ಬಂದಿಗೆ ಕ್ಷಯರೋಗದ ಅರಿವು ಮತ್ತು ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ಕ್ಷಯ ಪತ್ತೆ ಹಚ್ಚಬೇಕು. ಸಾರಿಗೆ ಇಲಾಖೆಯಿಂದ ಚಾಲಕರು, ನಿವರ್ಾಹಕರು, ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಕ್ಷಯರೋಗದ ಅರಿವು ಮತ್ತು ಪರೀಕ್ಷೆಯನ್ನು ಮಾಡಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕ್ಷಯರೋಗವನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಿ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸುವಂತೆ ಅವರು ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಎಂ.ಜಿ ಮಾತನಾಡಿ, ಜಿಲ್ಲೆಯಲ್ಲಿರುವ ಕ್ಷಯರೋಗದ ಸ್ಥಿತಿ-ಗತಿ ಕ್ಷಯರೋಗ, ಅದರ ಲಕ್ಷಣಗಳು, ಕಾರಣವಾಗುವ ಬ್ಯಾಕ್ಟಿರಿಯಾ, ರೋಗ ಹರಡುವಿಕೆ ಮತ್ತು ರೋಗವನ್ನು ಪತ್ತೆ ಕುರಿತ ಪರೀಕ್ಷೆ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಸಭೆಯಲ್ಲಿ ಕಾರ್ಯಕ್ರಮದ ಭಿತ್ತಿ ಪತ್ರಗಳನ್ನು ಅಪರ ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜು ಟಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜಂಬಯ್ಯ ಬಿ, ಜಿಲ್ಲಾ ಕುಷ್ಠರೋಗ ನಿರ್ಮೂ ಲನಾಧಿಕಾರಿ ಡಾ. ಎಸ್. ಕೆ. ದೇಸಾಯಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಸವರಾಜ ಕುಂಬಾರ, ಹಾಗೂ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸರಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.