ಮೂರು ಕರಡಿಗಳ ಯಶಸ್ವಿ ಸೆರೆ
Successful capture of three bears
ಲೋಕದರ್ಶನ ವರದಿ
ಬಳ್ಳಾರಿ 26: ಸಂಡೂರು ತಾಲ್ಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ‘ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್' ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.
ಕಳೆದ ಸುಮಾರು 10 ತಿಂಗಳಿನಿಂದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ. ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.
ಎಸಿಎಫ್ ಶರಣ್ ಕುಮಾರ್, ಆರ್‌ಎಫ್‌ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್‌ಎಫ್‌ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್‌ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಇವರಿಗೆ ಪಶುವೈದ್ಯರಾದ ಡಾ. ಪ್ರಕೃತಿ ಹಾಗೂ ವೈಲ್ಡ್ ಲೈಫ್ ಎಸ್‌ಒಎಸ್ ಎನ್‌ಜಿಒ ಸಂಸ್ಥೆಯವರು ಸಾಥ್ ನೀಡಿದ್ದರು.
ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ‘ರೇಡಿಯೋ ಕಾಲರ್' ಅಳವಡಿಸಲಾಗಿದೆ. ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ಅವರು ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 