ಹಳೇತೇಗೂರು ಗ್ರಾಮಕ್ಕೆ ಸಮರ್ಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಯಶಸ್ವಿ ಹೋರಾಟ
Successful struggle demanding provision of military bus system to Haletegur village
ಲೋಕದರ್ಶನ ವರದಿ
ಧಾರವಾಡ 17 : ಆಲ್ ಇಂಡಿಯಾ ಡೆಮೊಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಹಳೆತೇಗೂರು ಗ್ರಾಮಕ್ಕೆ ಸಮರ್ಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ನಗರದ ಹಳೆ ಬಸ್ ನಿಲ್ದಾಣದ ಎದುರುಗಡೆಗೆ ಯಶಸ್ವಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ಮಾತನಾಡಿ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಇಲ್ಲಿಯವರೆಗೂ ಬಹುತೇಕ ಹಳ್ಳಿಗಳು ಸರಿಯಾದ ಬಸ್ ವ್ಯವಸ್ಥೆಯನ್ನು ಕಂಡಿಲ್ಲ.ಹಳೇ ತೇಗೂರಿನಲ್ಲಿ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಧಾರವಾಡಕ್ಕೆ ಓದಲು ಬರುವ ಕಾರಣ ದಿನನಿತ್ಯ ಬಸ್ ಸಮಸ್ಯೆ ಅನುಭವಿಸುತ್ತಿದ್ದಾರೆ. ಸಮರ್ಕ ಬಸ್ ವ್ಯವಸ್ಥೆ ಇಲ್ಲದೆ ಇರುವುದು ಹಾಗೂ ಬರುವ ಬಸ್ ಗಳು ಸರಿಯಾದ ಸಮಯಕ್ಕೆ ಬರದೇ ಇರುವ ಕಾರಣ ಹಲವಾರು ಸಾರಿ ವಿದ್ಯಾರ್ಥಿಗಳು ತಡವಾಗಿ ತರಗತಿಗೆ ಹಾಜರಾಗುವುದು ಹಾಗೂ ತರಗತಿಯಿಂದ ಬೇಗ ಹೋಗುವ ಪರಸ್ಥಿತಿ ನಿರ್ಮಾಣವಾಗಿದೆ.ಕಡ್ಡಾಯ ಶಿಕ್ಷಣದ ಕುರಿತು ಮಾತನಾಡುವ ಸರ್ಕಾರಗಳು ಶಿಕ್ಷಣ ಕಲಿಯಲು ಅವಶ್ಯಕವಾಗಿರುವ ಕನಿಷ್ಠ ಬಸ್ ವ್ಯವಸ್ಥೆಯನ್ನು ಕಲ್ಪಿಸದೆ ಇರುವುದು ವಿಷಾದನೀಯ.
ಮುಂದುವರೆದು ಅಖಿಲ ಭಾರತ ರೈತ ಕೃಷಿ-ಕಾರ್ಮಿಕ ಸಂಘಟನೆಯ ಜಿಲ್ಲಾ ಕಾರ್ಯದರ್ಶಿಗಳಾದ ಶರಣಬಸವ ಗೋನವಾರ ಅವರು ಮಾತನಾಡಿ ಗ್ರಾಮೀಣ ಭಾಗದ ಜನತೆ ದಿನನಿತ್ಯ ಕೂಲಿ ಕೆಲಸಕ್ಕಾಗಿ ಧಾರವಾಡಕ್ಕೆ ಬರುತ್ತಾರೆ. ಹಾಗೂ ಅವರೆಲ್ಲರೂ ಸರ್ಕಾರಿ ಆಸ್ಪತ್ರೆಯ ಮೇಲೆ ಅವಲಂಬನೆಯಾಗಿರುವ ಕಾರಣ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಆಸ್ಪತ್ರೆಗೆ ಬರಲು ಸರಿಯಾದ ಬಸ್ ವ್ಯವಸ್ಥೆ ಕೂಡ ಇಲ್ಲ. ಇಲ್ಲಿ ಸರ್ಕಾರಕ್ಕೆ ಬಡ ಜನಗಳ ಬಗ್ಗೆ ಇರುವ ಬೇಜವಾಬ್ದಾರಿ ಧೋರಣೆ ನಾಚಿಕೆಗೇಡಿನ ಸಂಗತಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಕೊನೆಯಲ್ಲಿ ಜಿಲ್ಲಾ ವಿಭಾಗೀಯ ಸಂಚಾರ ಅಧಿಕಾರಿಗಳಾದ ಸಂತೋಷ್ ಕಮತ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರ ಸ್ವೀಕರಿಸಿದ ನಂತರ ಸಮಸ್ಯೆಯನ್ನು ಬಗೆಹರಿಸಿ ಸಮರ್ಕವಾಗಿ ಬಸ್ ಒದಗಿಸುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸದಸ್ಯರಾದ ಸಿದ್ದು ಶಶಿಕಲಾ ಎಐಕೆಕೆಎಂಎಸ್ ಜಿಲ್ಲಾ ಅಧ್ಯಕ್ಷರಾದ ದೀಪ ಕಾರ್ಯದರ್ಶಿಗಳಾದ ಶರಣಬಸವ ಗೋನವಾರ, ಊರಿನ ಗ್ರಾಮಸ್ಥರಾದ ಕಲ್ಲವ್ವ ನವಲೂರು, ಸೋಮಲಿಂಗ ಇಂಚಲ್, ವಿದ್ಯಾರ್ಥಿಗಳಾದ ಬಸವರಾಜ್, ಗಂಗಾಧರ್, ಜ್ಯೋತಿ ದಳವಾಯಿ, ಸ್ಫೂರ್ತಿ ಹಾಗೂ ಇನ್ನಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 