ಹಾವು ಕಚ್ಚಿದ 81 ವರ್ಷದ ವೃದ್ಧರಿಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
Successful treatment for 81-year-old snakebite victim at KLE Hospital
ಲೋಕದರ್ಶನ ವರದಿ
ಹಾವು ಕಚ್ಚಿದ 81 ವರ್ಷದ ವೃದ್ಧರಿಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ
ಬೆಳಗಾವಿ: ಹಾವು ಕಚ್ಚಿದ ಬಳಿಕ ಚಿಕಿತ್ಸೆ ವಿಳಂಬವಾದ ಪರಿಣಾಮ ತೀವ್ರ ಸೆಪ್ಟಿಕ್ ಶಾಕ್ ಹಾಗೂ ಬಹು ಅಂಗ ವೈಫಲ್ಯದಿಂದ ಬಳಲುತ್ತಿದ್ದ 81 ವರ್ಷದ ವೃದ್ಧರಿಗೆ ಬೆಳಗಾವಿಯ ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ತಂಡ ಯಶಸ್ವಿ ಚಿಕಿತ್ಸೆ ನೀಡಿ ಹೊಸ ಜೀವ ನೀಡಿದೆ.
ಒಂದು ವಾರದ ಹಿಂದೆ ಹಾವು ಕಚ್ಚಿದ್ದರೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದ ಕಾರಣ ರೋಗಿಯ ಎಡಗೈಯಲ್ಲಿ ತೀವ್ರ ಸೆಲ್ಯುಲೈಟಿಸ್, ಗ್ಯಾಂಗ್ರಿನ್, ಸೆಪ್ಟಿಕ್ ಶಾಕ್, ರಕ್ತಸಂಚಾರ ವೈಫಲ್ಯ ಹಾಗೂ ಬಹು ಅಂಗ ವೈಫಲ್ಯ ಉಂಟಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿ, ತಕ್ಷಣವೇ ತೀವ್ರ ನಿಗಾ, ದ್ರವ ಚಿಕಿತ್ಸೆ, ಪ್ರತೀಜೀವಕ ಓಷಧಿಗಳು ಹಾಗೂ ಬಹುಶಾಖಾ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಆರಂಭಿಸಲಾಯಿತು.
ಬಳಿಕ ಸಾಮಾನ್ಯ ಶಸ್ತ್ರಚಿಕಿತ್ಸಾ ವಿಭಾಗದ ತಜ್ಞರು ಸೋಂಕಿತ ಹಾಗೂ ಜೀವಹೀನಗೊಂಡ ಅಂಗಾಂಶಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆರವುಗೊಳಿಸಿ, ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಿದರು. ಐಸಿಯು, ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ ಮತ್ತು ನರ್ಸಿಂಗ್ ಸಿಬ್ಬಂದಿಯ ಸಮನ್ವಯದ ಚಿಕಿತ್ಸೆಯಿಂದ ರೋಗಿಯ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದ್ದು, ಸಂಪೂರ್ಣ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಈ ಕುರಿತು ವೈದ್ಯರು, ಹಾವು ಕಚ್ಚಿದ ತಕ್ಷಣ ಯಾವುದೇ ವಿಳಂಬ ಮಾಡದೆ ಸಮೀಪದ ಸುಸಜ್ಜಿತ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವುದು ಅತ್ಯಗತ್ಯ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಚಿಕಿತ್ಸೆ ವಿಳಂಬವಾದರೆ ಸೆಪ್ಟಿಕ್ ಶಾಕ್, ಬಹು ಅಂಗ ವೈಫಲ್ಯ ಸೇರಿದಂತೆ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಆಸ್ಪತ್ರೆಯ ಆಡಳಿತ ಮಂಡಳಿ ವೈದ್ಯಕೀಯ ತಂಡದ ಸಮರ್ಿತ ಸೇವೆಯನ್ನು ಶ್ಲಾಘಿಸಿದ್ದು, ಮುಂದೆಯೂ ಅತ್ಯುತ್ತಮ ಆರೋಗ್ಯ ಸೇವೆ ನೀಡುವ ಬದ್ಧತೆಯನ್ನು ಪುನರುಚ್ಚರಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 