'ಮಾರ್ಕ್'ನಲ್ಲಿ ಮಸ್ತ್ ಆಗಿ ಹೆಜ್ಜೆ ಹಾಕಿದ ಸುದೀಪ್, ನಿಶ್ವಿಕಾ
Sudeep, Nishvika make a strong appearance in 'Mark'
'ಮಸ್ತ್ ಮಲೈಕಾ ...' ಹಾಡಿಗೆ ಅಭಿಮಾನಿಗಳು ಫಿದಾ!
ಈಗಾಗಲೇ ಟ್ರೇಲರ್ ಹಾಗೂ ಹಾಡಿನಿಂದ ಪ್ರೇಕ್ಷಕರ ಮನಸು ಗೆದ್ದಿರುವ ಬಹು ನೀರೀಕ್ಷಿತ 'ಮಾರ್ಕ್' ಸಿನಿಮಾದಿಂದ ಮತ್ತೊಂದು ಸುಂದರ ಹಾಡು ಬಿಡುಗಡೆಯಾಗಿದೆ. ಕಿಚ್ಚ ಸುದೀಪ್ ನಟನೆಯ ಬಹು ನೀರೀಕ್ಷಿತ 'ಮಾರ್ಕ್' ಇದೇ ಡಿ. 25ರಂದು ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ 'ಮಾರ್ಕ್' ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆ ಮಾಡಲಾಗಿದೆ. ಹೌದು ಮಾರ್ಕ್ ಸಿನಿಮಾದ 'ಮಸ್ತ್ ಮಲೈಕಾ ...' ಹಾಡು ರೀಲೀಸ್ ಆಗಿದೆ. ಈ ಹಾಡಿನಲ್ಲಿ ಕಿಚ್ಚ ಸುದೀಪ್ ಹಾಗೂ ನಿಶ್ವಿಕಾ ನಾಯ್ಡು ಮಸ್ತ್ ಆಗಿ ಕುಣಿದಿದ್ದಾರೆ. ಮಲೈಕಾ ಆಗಿ ನಿಶ್ಚಿಕಾ ಕಾಣಿಸಿಕೊಂಡಿದ್ದಾರೆ. ಅನೂಪ್ ಭಂಡಾರಿ 'ಮಸ್ತ್ ಮಲೈಕಾ ...' ಹಾಡಿಗೆ ಸಾಹಿತ್ಯ ಬರೆದಿದ್ದು, ಸುದೀಪ್ ಮಗಳು ಸಾನ್ವಿ ಸುದೀಪ್ ಹಾಗೂ ನಕಾಶ್ ಅಜೀಜ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ವಿಜಯ್ ಕಾರ್ತಿಕೇಯ ಮಾರ್ಕ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿಜಯ್ ಹಾಗೂ ಸುದೀಪ್ ಕಾಮಬಿನೇಷನ್ 'ಮ್ಯಾಕ್ಸ್' ಸಿನಿಮಾ ಕಳೆದ ವರ್ಷ ಕ್ರಿಸ್ಮಸ್ ಹಬ್ಬದಂದು ರೀಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಸೌಂಡ್ ಮಾಡಿತ್ತು. ಇದೀಗ 'ಮಾರ್ಕ್' ಚಿತ್ರವನ್ನು ಈ ವರ್ಷದ ಕ್ರಿಸ್ಮಸ್ ಹಬ್ಬದಂತೆ ರೀಲೀಸ್ ಮಾಡುತ್ತಿದೆ ಚಿತ್ರತಂಡ. ಈ ಚಿತ್ರದಲ್ಲಿ ದೀಪ್ಷಿಕಾ, ನವೀನ್ ಚಂದ್ರ, ಗುರು ಸೋಮಸುಂರಂ, ರೋಶಿನಿ ಪ್ರಕಾಶ್, ಗೋಪಾಲ್‌ಕೃಷ್ಣ ದೇಶಪಾಂಡೆ, ಮಹಾಂತೇಶ್ ಹಿರೇಮಠ್, ಡ್ರ್ಯಾಗನ್ ಮಂಜು, ಆರ್ಚನಾ ಕೊಟ್ಟಿಗೆ, ಯೋಗಿ ಬಾಬು, ಶೈನ್ ಟಾಮ್ ಚಾಕೋ ಮುಂತಾದವರು ಅಭಿನಯಿಸಿದ್ದಾರೆ. ಸತ್ಯ ಜ್ಯೋತಿ ಫಿಲ್ಮ್ ಹಾಗೂ ಕಿಚ್ಚ ಕ್ರಿಯೇಷನ್ ಬ್ಯಾನರ್‌ನಡಿ ಸಿನಿಮಾ ನಿರ್ಮಾಣ ಮಾಡಲಾಗಿದೆ.
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 