ಕಾರ ಮೇಲೆ ಕಬ್ಬಿನ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು
ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ
ಕಾರ ಮೇಲೆ ಕಬ್ಬಿನ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು
ಬೆಳಗಾವಿ 25: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್ ಮಗುಚಿ ಭೀಕರ ದುರ್ಘಟನೆ ಸೋಮವಾರ ಸುವರ್ಣ ವಿಧಾನಸೌಧದ ಬಳಿ ನಡೆದಿದೆ.
ಹುಬ್ಬಳ್ಳಿಯ ಗೀರೀಶ್ ಕುಲಕರ್ಣಿ (24)ಮೃತಪಟ್ಟ ಯುವಕನಾಗಿದ್ದಾನೆ. ಪ್ರಥಮ್ ಮತ್ತು ಇನ್ನೊಬ್ಬ ಗೀರೀಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಸ್ನೇಹಿತರು ಹುಟ್ಟು ಹಬ್ಬ ಆಚರಣೆ ಮುಗಿಸಿ ಹುಬ್ಬಳ್ಳಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ಓವರ್ ಲೋಡ್‌ನಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿ ಹೋಗುತ್ತಿದ್ದವರ ಪೈಕಿ ಒಬ್ಬ ಸ್ಥಳದಲ್ಲಿ ಮೃತಪಟ್ಟರೆ ಇನ್ನಿಬ್ಬರು ಗಂಭೀರವಾಗಿ ಗಾಯ ಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 