ಶಾಂತಿಯುತ ಹಾಗೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಸಲಹೆ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
Suggestions for peaceful and eco-friendly festival celebrations: DC
ಗೌರಿಗಣೇಶ ಹಾಗೂ ಈದ್‌ಮಿಲಾದ್ ಹಬ್ಬಗಳ ಶಾಂತಿ ಸಭೆ
ಹಾವೇರಿ 22: ಹಬ್ಬಗಳು ಸಮಾನತೆ ಹಾಗೂ ಸಹೋದರತೆ ಸಂಕೇತವಾಗಿದ್ದು, ಹಾಗಾಗಿ ಜಿಲ್ಲೆಯಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯುತ ಹಾಗೂ ಪರಿಸರ ಸ್ನೇಹಿ ಹಬ್ಬವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಜರುಗಿದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ದೇಶದ ಸಂಸ್ಕೃತಿ, ಪರಂಪರೆ, ವೈವಿಧ್ಯತೆಯಿಂದ ಕೂಡಿದೆ. ಧರ್ಮಗಳು ನ್ಯಾಯದ ಬದುಕು ನಡೆಸುವವುದನ್ನು ಹೇಳಿಕೊಟ್ಟಿವೆ. ಪೈಗಂಬರ್ ಅವರು ಸಹಾನುಭುತಿ, ಸಮಾನತೆ ಭೋಧಿಸಿದ್ದಾರೆ. 12 ನೇ ಶತಮಾನದದಲ್ಲಿ ಸಂತರು, ಶರಣರು ಹಾಗೂ ಸೂಫಿಗಳು ಸಮಾಜದಲ್ಲಿ ಸಾಮರಸ್ಯ ಬೆಸುವ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಆಗದ ಹಾಗೆ ಎಲ್ಲರೂ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸೋಣ ಎಂದರು.
ಸಾರ್ವಜನಿಕ ಗಣೇಶ್ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ಅನುಕೂಲವಾಗುವಂತೆ ನಗರ ಸಭೆಯಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗುವುದು. ಗಣೇಶ್ ಮಂಡಳಿಗಳು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಆಯೋಜನೆ ಮಾಡಬೇಕು. ಸರ್ಕಾರದ ಮಾರ್ಗ ಸೂಚಿಸಿ ಪಾಲಿಸಬೇಕು. ಡಿಜೆ ಬದಲಾಗಿ ಸಂಪ್ರದಾಯಿಕ ವಾದ್ಯಗಳಿಗೆ ಹಾಗೂ ಮಣ್ಣಿನ ಮೂರ್ತಿ ಪ್ರತಿಷ್ಠಾಪನೆ ೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಹಬ್ಬ ಆಚರಣೆ ಸಮಯದಲ್ಲಿ ಸ್ವಚ್ಛ ತೆಗೆ ಆದ್ಯತೆ ನೀಡಬೇಕು ಹಾಗೂ ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಗಣೇಶ ಮೂರ್ತಿಗಳ ವಿಸರ್ಜನೆಗೆ ತಾತ್ಕಾಲಿಕ ಹೊಂಡ ನಿರ್ಮಾಣ, ಸಂಚಾರಿ ವಾಹನ ವ್ಯವಸ್ಥೆ ಮಾಡುವಂತೆ ಸಂಬಂಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧ ವಂಟಗೋಡಿ ಮಾತನಾಡಿ, ಹಬ್ಬದ ಆಚರಣೆಯಲ್ಲಿ ಸುರಕ್ಷತೆ ಬಹಳ ಮುಖ್ಯ. ಹಾಗಾಗಿ ಗಣೇಶ್ ಮಂಡಳಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಜನರ ಓಡಾಡಕ್ಕೆ ತೊಂದರೆಯಾಗದಂತೆ ಪೆಂಡಾಲ್ ಹಾಕಬೇಕು, ಮಳೆಗಾಲ ಆಗಿರುವುದರಿಂದ ವಿದ್ಯುತ್ ಸಂಪರ್ಕ ಸರಿಯಾಗಿರಬೇಕು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಗಣೇಶ ಪ್ರತಿಷ್ಫಾನೆ ಮಂಡಳಿ ಆಯೋಜಕರೇ ಪೆಂಡಾಲ್ ಕಾವಲಿಗೆ 24*7 ವಾಲಂಟರಿಯರ್ ನೇಮಕ ಮಾಡಬೇಕು. ಪೊಲೀಸರು ರೌಂಡ್ಸ್ ಹಾಕುತ್ತಾರೆ, ಮೆರವಣಿ ಮಾರ್ಗ ಬದಲಾವಣೆ ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ ಮತ್ತು ಬಂಟಿಂಗ್ ಅಳವಡಿಕೆಗೆ ಅನುಮತಿ ಕಡ್ಡಾಯವಾಗಿದೆ. ಯಾವುದೆ ಧರ್ಮಗಳಿಗೆ ಧಕ್ಕೆಯಾಗಬಾರದು ಎಂದು ಹೇಳಿದರು.
ಸಾರ್ವಜನಿಕ ಗಣೇಶ್ ಮೂರ್ತಿಗಳ ವೀಕ್ಷಣೆಗೆ ಸಾರ್ವಜನಿಕರು ಬಂದಾಗ ಯಾವುದೇ ನೂಕು ನುಗ್ಗಲು ಉಂಟಾಗದಂತೆ ವ್ಯವಸ್ಥೆ ಮಾಡಬೇಕು. ದರ್ಶನಕ್ಕೆ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಹಾಗೂ ಸಿ ಸಿ ಕ್ಯಾಮರಾ ಅಳವಡಿಸಬೇಕು ಎಂದರು.
ಡಿಜೆ ಬಳಕೆಗೆ ಅವಕಾಶ ಇರುವುದಿಲ್ಲ. 120 ಡೆಸಿಬಲ್ ಮಿರಿ ಧ್ವನಿ ವರ್ಧಕ ಬಳಕೆ ಮಾಡುವಂತಿಲ್ಲ. ನಮ್ಮ ಸಾಂಪ್ರದಾಯಿಕ ವಾದ್ಯಗಳಿಗೆ ಹಾಗೂ ಸ್ಥಳೀಯ ಕಲಾ ತಂಡಗಳಿಗೆ ಅವಕಾಶ ನೀಡಿ, ನಮ್ಮ ಕಲೆ ಪ್ರೋತ್ಸಾಹಿಸಬೇಕು. ಇದರಿಂದ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಸಂಭ್ರಮದ ಜೊತೆಗೆ ಭಕ್ತಿ-ಭಾವ ಉಂಟಾಗುತ್ತದೆ. ಹಬ್ಬಗಳನ್ನು ಶಾಂತಿಯುತ ಹಾಗೂ ಸೌಹಾರ್ದತೆ ಯಿಂದ ಆಚರಿಸೋಣ ಎಂದು ಹೇಳಿದರು.
ವಿವಿಧ ತಾಲೂಕುಗಳಿಂದ ಆಗಮಿಸಿದ ಗಣೇಶ ಮಂಡಳಿ ಮುಖಂಡರು, ಡಿಜೆ ಬಳಕೆಗೆ ಅವಕಾಶ ನೀಡುವಂತೆ, ರಸ್ತೆ ದುರಸ್ಥಿ ಮಾಡಿಸುವಂತೆ, ಗಣೇಶ ವಿಸರ್ಜನೆಗೆ ವ್ಯವಸ್ಥೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತಗೆ ಮನವಿ ಮಾಡಿಕೊಂಡರು. ಗಣೇಶ ಮಂಡಳಿ ಮುಖಂಡರು ಹಾಗೂ ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಶಾಂತಿಯುತವಾಗಿ ಹಬ್ಬ ಆಚರಣೆ ಮಾಡುವ ಭರವಸೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಸವಣೂರ ಉಪವಿಭಾಗಾಧಿಕಾರಿ ಶುಭಂ ಶುಕ್ಲ, ಹಾವೇರಿ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಫುನಿತ್, ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 