ಕ್ವಾರಂಟೈನ್ ನಲ್ಲಿದ್ದ ಯುವಕ ಆತ್ಮಹತ್ಯೆ

ಬೀದರ್,  ಮೇ 26,ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ  ಮಂಗಳವಾರ ಬೆಳಗ್ಗೆ ನಡೆದಿದೆ.ಈತ   ಮಹಾರಾಷ್ಟ್ರದ ಮುಂಬೈನಿಂದ‌ ತನ್ನ ಪತ್ನಿಯೊಂದಿಗೆ ಜಿಲ್ಲೆಗೆ ವಾಪಸ್ಸಾದ  ಹಿನ್ನೆಲೆಯಲ್ಲಿ  ದಂಪತಿಯನ್ನು ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಕಿತ್ತೂರ ರಾಣಿ  ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಮೃತ ಯುವಕ ಔರಾದ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದು, ನಾರಾಯಣಪುರ ಗ್ರಾಮದವರು ಎನ್ನಲಾಗಿದೆ.ಇಂದು ಬೆಳಗಿನ ಜಾವ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಔರಾದ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.