ಕೋಟಕ್ ಮಹೀಂದ್ರ ಬ್ಯಾಂಕ್ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ

 ಬೆಂಗಳೂರು, ನ.11 ;     ಜಾರ್ಖಂಡ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೋಟಕ್ ಮಹೀಂದ್ರ ಬ್ಯಾಂಕ್ನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ 27 ವರ್ಷದ ರೋಹಿತ್,  ನಗರದ ದೊಮ್ಮಲೂರು ಬಳಿಯ ಸಾಯಿಕೃಷ್ಣ ಅಪಾಟ್ರ್ಮಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪಾಟ್ರ್ಮಂಟ್ನ ಫ್ಯ್ಲಾಟ್ನಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಪಾಟ್ರ್ಮಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದರು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ರೋಹಿತ್ ಶವ ಪತ್ತೆಯಾಗಿದ್ದು, ದೇಹ ಅರ್ಧ ಕೊಳೆತಿತ್ತು ಎಂದು ತಿಳಿದು ಬಂದಿದೆ. ರೋಹಿತ್ ತಂದೆ ಹರೀಂದರ್ ಸಿಂಗ್ ಅವರು ಜಾರ್ಖಂಡ್ ಕೇಡರ್ನ  ಐಎಎಸ್ ಅಧಿಕಾರಿಯಾಗಿದ್ದರು. ಅಲ್ಲದೆ, ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮಾಜಿ ಸಲಹೆಗಾರರಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.