ಬೆಂಗಳೂರು, ಏ.27,ಕೊರೊನಾ ಸೋಂಕಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಕ್ಟೋರಿಯ ಆಸ್ಪತ್ರೆಯಲ್ಲಿ ಸಂಭವಿಸಿದೆಉಸಿರಾಟದ ತೊಂದರೆ ಎಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ಉಸಿರಾಟದ ತೊಂದರೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯ ನಂತರ ಅದು ಕೊರೊನಾ ಎಂಬುದು ಧೃಡಪಟ್ಟ ಮೇಲೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಸೋಂಕಿತ-466 ವ್ಯಕ್ತಿ ಟ್ರೂಮ್ ಕೇರ್ ಸೆಂಟರ್ ಮೇಲಿಂದ ಹಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.