ಮಂಗಳೂರು, ಫೆ 28: ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಸೋಮೇಶ್ವರ ರೈಲು ನಿಲ್ದಾಣದಲ್ಲಿ ನಡೆದಿದೆ.
ಬೆಳಗಾವಿಯ 23 ವರ್ಷದ ಸಮ್ಮದ್ ರಾಯಗೌಡ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಪ್ರೇಯಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಳೆ ಎಂದು ಡೆತ್ ನೋಟ್ ಬರೆದಿಟ್ಟು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.