39 ವರ್ಷಗಳ ಸುದೀರ್ಘ ಸೇವೆಗೆ ಸುಜಾತಾ ಚಲವಾದಿ ಸನ್ಮಾನ
Sujatha Chalavadi felicitated for 39 years of long service
ಲೋಕದರ್ಶನ ವರದಿ
ಮಮದಾಪುರ 14: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಮಮದಾಪುರ ಗ್ರಾಮದ ಆರೋಗ್ಯ ಇಲಾಖೆಯಲ್ಲಿ ಬರೋಬ್ಬರಿ 39 ವರ್ಷಗಳ ಕಾಲ ಶುಶ್ರೂಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಜಾತಾ ಜಟ್ಟೆಪ್ಪ ಚಲವಾದಿ ಅವರನ್ನು ಮಮದಾಪುರದ ಚಲವಾದಿ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮದ ಯುವ ನಾಯಕ ಸುಖದೇವ್ ಕಟ್ಟಿಮನಿ, “ಭೂಮಿಗೆ ಬರುವುದಕ್ಕಿಂತ ಮೊದಲು ನಮ್ಮನ್ನು ಕಾಯುವ ಭಗವಂತನ ಮೇಲೆ ನಂಬಿಕೆ ಇಡುತ್ತೇವೆ. ಆದರೆ ಭೂಮಿಯ ಮೇಲೆ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುವವರು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ,” ಎಂದು ಹೇಳಿದರು.
ಸುಜಾತಾ ಚಲವಾದಿ ಅವರು ತಮ್ಮ 39 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರೂ, ಜನರ ಸೇವೆಯಿಂದ ಅವರು ಎಂದಿಗೂ ನಿವೃತ್ತರಾಗಿಲ್ಲ ಎಂದು ಸುಖದೇವ್ ಕಟ್ಟಿಮನಿ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಸದಾಶಿವ ಕಾಖಂಡಿಮಠ, ಕೌಸರ್ ನಿಯಾಜ್ ಅತ್ತಾರ, ಲಕ್ಷ್ಮಣ ತೇಲಿ, ಸುಖದೇವ್ ಕಟ್ಟಿಮನಿ, ಸಾಬುರಾವ್ ಚಲವಾದಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸುಧೀರ್ಘ ಸೇವೆ ಸಲ್ಲಿಸಿದ ಸುಜಾತಾ ಚಲವಾದಿ ಅವರ ಸೇವೆಯನ್ನು ಗಣ್ಯರು ಹಾಗೂ ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಶ್ಲಾಘಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 