ಸುಮಿತ್ರಾ ಮೆಣಸಿಕಾಯಿ ಅವರು ರಾಜ್ಯ ಯುವಪ್ರಶಸ್ತಿಗೆ ಆಯ್ಕೆ

ಸುಮಿತ್ರಾ ಮೆಣಸಿಕಾಯಿ ಅವರು  ರಾಜ್ಯ ಯುವಪ್ರಶಸ್ತಿಗೆ ಆಯ್ಕೆ Sumitra Menasikai selected for State Youth Award

ಗದಗ  17: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ನಿಮಿತ್ತವಾಗಿ ಇದೇ ಜ. 18 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದಲ್ಲಿ 2025-26 ನೇ ಸಾಲಿನ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು, ಗದಗ ಜಿಲ್ಲೆಯಿಂದ ಸುಮಿತ್ರಾ ಮೆಣಸಿಕಾಯಿ ಇವರು ಆಯ್ಕೆಯಾಗಿದ್ದಾರೆ.  

ತಾಲೂಕಿನ ಬೆಟಗೇರಿಯ ನಿವಾಸಿಯಾಗಿರುವ ಇವರು ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗಂಗಾವತಿ ತಾಲೂಕು ಪಂಚಾಯತ್‌ದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಕಳೆದ 7 ವರ್ಷಗಳಿಂದ ವಿವಿಧ ಸಂಸ್ಥೆಗಳಲ್ಲಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು, ಉತ್ತಮವಾದ ಕಾರ್ಯಗಳನ್ನು ಮಾಡಿದ್ದಾರೆ.  ಮಹಿಳಾ ಸಬಲೀಕರಣ, ಯುವ ಸಬಲೀಕರಣ, ಆರೋಗ್ಯ, ವಿಶೇಷವಾಗಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ನೈರ್ಮಲ್ಯ, ಶಿಕ್ಷಣ,  ಜಾಗೃತಿ ಕಾರ್ಯಕ್ರಮಗಳು, ಸ್ವಚ್ಛತೆ ಮತ್ತು ನೈರ್ಮಲ್ಯ, ಮಹಿಳೆಯರಿಗೆ ತರಬೇತಿ ಕಾರ್ಯಕ್ರಮಗಳು, ಗ್ರಾಮೀಣಾಭಿವೃದ್ಧಿ ಮಾಡುವ ನಿಟ್ಟಿನಲ್ಲಿ, ಕೆಲಸಗಳನ್ನು ಸಾಮಾನ್ಯರಿಗೆ ತಲುಪಿಸುವ ಮೂಲಕ ಸೇವೆಗಾಗಿರುವ ಇವರ ಅಂಶಗಳನ್ನು ಗುರುತಿಸಿ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.  

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆಯ ಪ್ರಯುಕ್ತ ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಗಣಿಸಿ ರಾಜ್ಯ ಯುವ ಪ್ರಶಸ್ತಿಯನ್ನು ನೀಡುತ್ತಾರೆ. ಅದರಂತೆ  ಇದೇ ಜ. 18 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ದಲ್ಲಿ ಯುವ ಸಂಭ್ರಮ-2026 ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಜ್ಯ ಯುವ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದ್ದು, 2025-26 ನೇ ಸಾಲಿನ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಒಕ್ಕೂಟಗಳ ರಾಜ್ಯಾಧ್ಯಕ್ಷ ಎಸ್‌. ಬಾಲಾಜಿ ಅವರು ತಿಳಿಸಿದ್ದಾರೆ.