ಬೆಂಗಳೂರು, ಮೇ.24,ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಾರಿಗೊಳಿಸಲಾಗಿದ್ದ 4.0 ಭಾನುವಾರದ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಅವರು, ಚಿಕ್ಕ ಪುಟ್ಟ ಸಮಸ್ಯೆಗಳು ಎದುರಾಗಿದ್ದರೂ ಅವುಗಳನ್ನು ಕರ್ತವ್ಯ ನಿರತ ಪೊಲೀಸರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಹೊರಗಿನಿಂದ ಬಂದವರೇ ಹೆಚ್ಚು ಕಿರಿಕಿರಿ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಚೆಕ್ ನೀಡುವ ಯಾವುದೇ ಹಕ್ಕಿಲ್ಲ. ಆದ್ದರಿಂದಲೇ ಅವರು ಪದೇ ಪದೆ ಚೆಕ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.ಈಗಾಗಲೇ ಉದ್ಯೋಗ ಅರಿಸಿ ರಾಜ್ಯಕ್ಕೆ ಬಂದಿದ್ದ 1.5 ಲಕ್ಷಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ತಮ್ಮೂರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.