ಕೋಲ್ಕತ್ತಾ, ನ 9 : ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಬುಲ್ ಬುಲ್ ಚಂಡಮಾರುತ ಮತ್ತಷ್ಟು ಸಕ್ರಿಯವಾಗಿದ್ದು ಭಾನುವಾರ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಈ ಬಗ್ಗೆ ಮುನ್ಸೂಚನೆ ನೀಡಿದ್ದು ಇದರ ಪರಿಣಾಮ ನಿನ್ನೆಯಿಂದಲೇ ಕೋಲ್ಕತ್ತಾ ನಗರವೂ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಿರಬೇಕೆಂದು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದೆ. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಶನಿವಾರ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.