ಔರಂಗಾಬಾದ್ / ಮಹಾರಾಷ್ಟ್ರ ಅ 12: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಒಂದು ವಾರ ಬಾಕಿ ಇದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಜಲ್ ಗಾವ್ ನ ಖಂದೇಶ್ ಪ್ರಾಂತ್ಯದಲ್ಲಿ ತಮ್ಮ ಚುನಾವಣಾ ಪ್ರಚಾರ ಕಾರ್ಯಕ್ಕೆ ಭಾನುವಾರ ಚಾಲನೆ ನೀಡಲಿದ್ದಾರೆ. ಅವರು ರಾಜ್ಯಾದ್ಯಂತ ಒಂಭತ್ತು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಿದಲಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಸಂವಿಧಾನ ವಿಧಿ 370 ರ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಭ್ರಷ್ಟಾಚಾರ ನಿರ್ಮೊಲನೆ ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕತೆ ಕುರಿತಂತೆ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಈಗಾಗಲೇ ರಾಜ್ಯದ ವಿವಿಧೆಡೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿದ್ದಾರೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಭಾನುವಾರದಿಂದ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಈ ಮಧ್ಯೆ ಚುನಾವಣಾ ಆಯೋಗ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಅಕ್ರಮಗ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದಾರೆ.ಮಹಾರಾಷ್ಟ್ರ ವಿಧಾನಸಭೆಗೆ ಅ 21 ರಂದು ಮತದಾನ ನಡೆಯಲಿದೆ. ಅ 24 ರಂದು ಮತ ಎಣಿಕೆ ನಡೆಯಲಿದೆ.