ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Sunday Talent Award Ceremony
ಕೊಪ್ಪಳ 12: ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘ, ಕುಷ್ಟಗಿ ತಾಲೂಕು ದೇವಾಂಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ದೇವಾಂಗ ಸಮಾಜದ ವತಿಯಿಂದ ಡಾ. ಎಸ್.ಜಿ. ಬಿಜ್ಜಳ ಸ್ಮಾರಕ ಪ್ರತಿಷ್ಠಾನ ಸಹಯೋಗದಲ್ಲಿ ಕುಷ್ಟಗಿ ತಾಲೂಕಿನ ದೌಟಿಹಾಳ ಗ್ರಾಮದ ದೇವಲ ಮಹರ್ಷಿ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಬೆಳಗ್ಗೆ 10.30 ಕ್ಕೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರಪ್ಪ ಚೆನ್ನಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆಯೂ ಈ ವರ್ಷದ ಕೂಡ ದೇವಾಂಗ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರಿ್ಡಸಲಾಗಿದೆ. ಈ ಬಾರಿ ದೋಟಿಹಾಳ ಗ್ರಾಮದಲ್ಲಿ ಕಾರ್ಯಕ್ರಮ ಏರಿ್ಡಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಶಾಸಕರಾದ ದೊಡ್ಡನಗೌಡ ಪಾಟೀಲ್ ಹಾಗೂ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ ಹಿಟ್ನಾಳ, ಮಾಜಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಹಸನ್ಸಾಬ್ ದೋಟಿಹಾಳ, ಕೆ ಶರಣಪ್ಪ ಹಾಗೂ ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ, ಸಮಾರಂಭದ ಸಾನಿಧ್ಯವನ್ನು ದೇವಾಂಗ ಪೀಠಾಧ್ಯಕ್ಷರು ಹಾಗೂ ಜಗದ್ಗುರುಗಳಾದ ದಯಾನಂದಪುರಿ ಮಹಾಸ್ವಾಮಿಗಳು ವಸಲಿದ್ದಾರೆ.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಹಾಗೂ ಡಿಗ್ರಿಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರ ಹಾಗೂ ಹೊಸದಾಗಿ ಸರ್ಕಾರಿ ನೌಕರಿಗೆ ಸೇರಿದದವರನ್ನು ಹಾಗೂ ಸಮಾಜದ ಹತ್ತು ಜನ ಸಾಧಕರನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ದೇವಾಂಗ ಸಮಾಜ ಪ್ರತಿ ವರ್ಷವೂ ಮಾಡುತ್ತಾ ಬಂದಿದೆ. ಅದರಂತೆ ಈ ವರ್ಷದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ದೇವಾಂಗ ಸಮಾಜದ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾರಾಯಣಪ್ಪ ಕೊಳ್ಳಿ, ಗೌರವಾಧ್ಯಕ್ಷ ಪ್ರಹ್ಲಾದ ಮೆದಿಕೇರಿ, ಭಾಗ್ಯನಗರ ದೇವಾಂಗ ಸಮಾಜದ ಅಧ್ಯಕ್ಷ ಚಂದ್ರಕಾಂತ ಬೆಟಗೇರಿ, ಹನಮಂತಗೌಡ್ರ ಗಾಳಿ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 