ವಿವಿಧ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ
Support for the struggle from various organizations and senior writers of the district
ಬೆಳಗಾವಿ 14: ಸರ್ಕಾರಿ ನೌಕರರ ಸಂಘದ ನಿವೃತ್ತಿ ಅಧಿಕಾರಿಗಳಾದ ಸುರೇಶ್ ಜೆ.ವಿ ಅವರು ಆಶಾ ಕಾರ್ಯಕರ್ತೆಯರ ಧರಣಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕನಿಷ್ಟ ಜೀವನ ನಡೆಸಲು 15000 ಸಂಬಳ ಪ್ರತಿಯೊಬ್ಬ ನೌಕರರಿಗೂ ಬೇಕು. ಹಳ್ಳಿಗಳಲ್ಲಿ, ಗ್ರಾಮೀಣ ಮಟ್ಟದಲ್ಲಿ ಸಮುದಾಯದ ಆರೋಗ್ಯ ಸುದಾರಿಸುವಲ್ಲಿ ಹಗಲಿರುಳು ಕೆಲಸ ಮಾಡುತ್ತಿರುವ ನಿಮಗೆ ಸಂಬಳ ಎಷ್ಟು ಕೊಟ್ಟರೂ ಸಾಲದು ಆದರೆ ನೀವು ಕೇಳುತ್ತಿರುವ ಕೇವಲ 10000 ನೀಡುತ್ತಿಲ್ಲ ಎಂದರೆ ಹೇಗೆ ಬದುಕಬೇಕು. ದುಬಾರಿ ಬೆಲೆ ಏರಿಕೆ, ಶಿಕ್ಷಣ ಮಾರಾಟವಾಗುವ ಸಂದರ್ಭದಲ್ಲಿ ಮಹಿಳೆಯರು ಹೇಗೆ ಬದುಕು ಕಟ್ಟಿಕೊಳ್ಳಬೇಕು ಉತ್ತರಿಸಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು. ಆರ್ಥಿಕವಾಗಿ ಮೇಲೆ ಬರಬೇಕೆಂದರೆ ಸರಿಯಾಗಿ ಸಂಬಳ ನೀಡಬೇಕು. ಗೌರವ ಘನತೆಯಿಂದ ಬದುಕವಷ್ಟು ಹಣ ನೀಡಬೇಕು ಎಂದು ಕರೆ ನೀಡಿದರು.
ಹೋರಾಟವನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಮುಖಂಡರಾದ ಲಕ್ಷ್ಮಣ ಹಂದ್ರಾಳ ರವರು ಮಾತನಾಡುತ್ತಾ ಕಾರ್ಮಿಕರ ಪರ ನೀತಿಗಳು ಜಾರಿಗೊಳ್ಳಬೇಕು. ತಮ್ಮ ಆರೋಗ್ಯವನ್ನು ಕಡೆಗಣಿಸಿ ಆರೋಗ್ಯ ಸೇವೆಯಲ್ಲಿ ತೊಡಗಿರುವ ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೇಬೇಕು ಅಲ್ಲಿಯವರೆಗೆ ನಿಮ್ಮ ಜೊತೆ ನಮ್ಮ ಕಾರ್ಮಿಕ ಸಂಘಟನೆ ಇರುತ್ತದೆ ಎಂದು ಹೇಳಿದರು.
ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಉದ್ದೇಶಿಸಿ ಜಮಾತ್-ಇ ಸ್ಲಾಂ ಅಧ್ಯಕ್ರರಾದ ಎಮ್ ಎ ಬಳಗನೂರ್ ರವರು ಮಾತನಾಡುತ್ತಾ ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಬಂಡವಾಳಶಾಹಿ ಪರ ನೀತಿಗಳನ್ನು ಜಾರಿಗೊಳಿಸುತ್ತಿರುವ ಸರ್ಕಾರ ಬಡವರ, ಕಾರ್ಮಿಕರ ಪರವಾಗಿ ಎಲ್ಲಿಯೂ ಒಂದು ಮಾತನಾಡುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಹೊರಾಟ ಮಾಡುವ ಹಕ್ಕಿದೆ. ಇಂತಹ ಹಕ್ಕುಗಳ ರಕ್ಷಣೆ ಮಾಡುವ ಕೆಲಸ ಸರ್ಕಾರದ್ದು ಹಕ್ಕುಗಳನ್ನು ಕಸಿದುಕೊಳ್ಳುವುದಲ್ಲ. ಪ್ತತಿಯೊಂದು ವಸ್ತುಗಳ ಬೆಲೆ ಏರಿಕೆ ಗಗನಕ್ಕೇರುತ್ತಿದೆ, ಇಂತಹ ಸಂದರ್ಭದಲ್ಲಿ ಮನೆಯನ್ನು ನಡೆಸುವುದು ತುಂಬಾ ಕಷ್ಟ ಆದ್ದರಿಂದ ಅಶಾ ಕಾರ್ಯಕರ್ತೆಯರಿಗೆ ಪ್ರೋತ್ಸಹಧನವನ್ನು ಈ ಕೂಡಲೇ ಹೆಚ್ಚಿಸಿ, ಅವರಿಗೆ ನ್ಯಾಯ ಒದಗಿಸಬೇಕೆಂದು ಕರೆ ನೀಡಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ರರಾದ ನಿಂಗಮ್ಮ ಹಿರೇಮಠ ಅವರು ಮಾತನಾಡುತ್ತಾ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಒಂದೆ ಕೊಂಡಿಯಂತೆ ಕೆಲಸ ಮಾಡುತ್ತಿದ್ದೇವೆ. ಬೀದಿಗಿಳಿದ ಹೋರಾಟ ಮಾಡುತ್ತಿರುವ ನಿಮ್ಮ ಹೋರಾಟ ನ್ಯಾಯಯುತವಾಗಿದೆ. ಆಶಾಗಳಿಗೆ ಕೊಟ್ಟ ಆಶ್ವಾಸನೆಯನ್ನು ಮುಖ್ಯಮಂತ್ರಿಯವರು ಉಳಿಸಿಕೊಳ್ಳಬೇಕು ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುತ್ತಾ ಅವರ ಹಕ್ಕುಗಳನ್ನು ಕೇಳುತ್ತಿದ್ದಾರೆ, ಅವರ ಹಕ್ಕು ಮತ್ತು ಬೇಡಿಕೆಗಳನ್ನು ಸರ್ಕಾರ ಈ ಕೂಡಲೇ ಈಡೇರಿಸಬೇಕು ಎಂದು ಹೇಳಿದರು.
ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿಗಳಾದ ಕಾವೇರಿ ರಜಪೂತ ರವರು ಮಾತನಾಡುತ್ತಾ ಸರ್ಕಾರ 6000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದರ ವಿರುದ್ದ 50 ಲಕ್ಷ ಸಹಿ ಸಂಗ್ರಹಣ ವಾಗಿದೆ. ಇಂತಹ ಸರ್ಕಾರಿ ಶಾಲೆಗಳಲ್ಲಿ ಬಡವರ ಕಾರ್ಮಿಕರ ಮಕ್ಕಳು ಓದುತ್ತಿರುವುದು. ಸರ್ಕಾರಿ ಶಾಲೆಗಳನ್ನು ಉನ್ನತಿಕರಣಗೊಳಿಸಬೇಕು ಎಂದರು. ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಇಂತಹ ಹೋರಾಟಕ್ಕ ನಮ್ಮ ವಿದ್ಯಾರ್ಥಿ ಸಂಘಟನೆ ಬೆಂಬಲವಿರುತ್ತದೆ ಎಂದು ಹೇಳಿದರು.
ಯುವಜನ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಮ ಹಿರೇಮಠ, ದಲಿತ ಸಂಘಟನೆಯ ಚೆನ್ನು ಕಟ್ಟಿಮನಿ, ಅಕ್ಷಯ್, ಅಬ್ದುಲ್ ರೆಹಮಾನ್ ನಾಸಿರ್, ಇನ್ನಿತರರು ಹೋರಾಟಕ್ಕೆ ಬೆಂಬಲಿಸಿ ಮಾತನಾಡಿದರು, ಈ ಹೋರಾಟದಲ್ಲಿ ಆಶಾ ಜಿಲ್ಲಾ ನಾಯಕರಾದ ಭಾರತಿ ದೇವಕತೆ, ಅಂಬಿಕಾ ವಳಸಂಗ, ಲೈಲಾ ಪಠಾಣ್, ಲಕ್ಷ್ಮಿ ಸಿಮಿಕೇರಿ, ಮಲ್ಲಮ್ಮ ಕಂಠಿ, ಮಲ್ಲಮ್ಮ ಹರಿಜನ, ಸುಮಂಗಲ ಪಡಸಾಲಿ, 600 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಹೋರಾಟದಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ರಿಷಿ ಆನಂದ ಅವರು ಪ್ರತಿಭಟನಾ ಸ್ಥಳಕ್ಕ ಆಗಮಿಸಿ ಮನವಿ ಪತ್ರ ಸ್ವೀಕರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದರು. ನಂತರ ಹೋರಾಟವನ್ನು ಉದ್ದೇಶಿಸಿ ಮಾತನಾಡಿ ನಿಮ್ಮ ಬೇಡಿಕೆಗಳನ್ನು ಶೀಘ್ರದಲ್ಲಿ ಈಡೇರಿಸಲಾಗುತ್ತದೆ ನಿಮ್ಮ ಹೋರಾಟವನ್ನು ಇಲ್ಲಿಗೆ ಹಿಂಪಡೆಯಿರಿ ಮತ್ತು ನಾಳೆ ನಿಮ್ಮ ಕಾರ್ಯದಲ್ಲಿ ತೊಡಗಿಸಿಕೊಳ್ಳಿ ಎಂದರು. ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.
ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಆಗಮಿಸಿದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಧಿಕಾರಿಗಳು ನಮ್ಮ ಸಂಘಟನೆಯ ರಾಜ್ಯ ನಾಯಕರೊಂದಿಗೆ ಚರ್ಚೆ ಮಾಡಿ ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ರೂಪದಲ್ಲಿ ಪತ್ರ ನೀಡಿದ್ದಾರೆ.
ಬೇಡಿಕೆಗಳು
1. ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸಿ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವ ತೀರ್ಮಾನವನ್ನು ಕೈಬಿಡಲಾಗಿದೆ.
2. ಮೌಲ್ಯಮಾಪನ ಆಧಾರದ ಮೇಲೆ ಯಾವುದೇ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ.
3. ಇನ್ನು ಇತರೆ ಬೇಡಿಕೆಗಳನ್ನು ಕೂಲಂಕುಷವಾಗಿ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 