ಸೆಂಗಾರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ
Supreme Court blocks Sengar's bail
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ಗೆ ದೆಹಲಿ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಇದರೊಂದಿಗೆ ಸೆಂಗಾರ್ ಸದ್ಯಕ್ಕೆ ಜೈಲಿನಿಂದ ಹೊರಬರುವ ಸಾಧ್ಯತೆ ಇಲ್ಲದಂತಾಗಿದೆ.
ದೆಹಲಿ ಹೈಕೋರ್ಟ್ ಇತ್ತೀಚೆಗೆ ಸೆಂಗಾರ್ಗೆ ಮಂಜೂರು ಮಾಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ (CBI)
ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ಪ್ರಕರಣದಲ್ಲಿ "ಕಾನೂನಿನ ಗಂಭೀರ ಪ್ರಶ್ನೆಗಳು" ಅಡಕವಾಗಿವೆ ಎಂದು ಅಭಿಪ್ರಾಯಪಟ್ಟಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ನ್ಯಾಯಪೀಠವು, ಸೆಂಗಾರ್ ಈಗಾಗಲೇ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವುದರಿಂದ ಅವರು ಜೈಲಿನಲ್ಲೇ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಸಿಬಿಐ (CBI) ಸಲ್ಲಿಸಿದ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಕುಲದೀಪ್ ಸಿಂಗ್ ಸೆಂಗಾರ್ಗೆ ನೋಟಿಸ್ ಜಾರಿ ಮಾಡಿದ್ದು, ಈ ಬಗ್ಗೆ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
2017ರಲ್ಲಿ ಉತ್ತರ ಪ್ರದೇಶದ ಉನ್ನಾವ್ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸೆಂಗಾರ್ ದೋಷಿಯಾಗಿದ್ದ. ಅದರಂತೆ 2019 ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯವು ಸೆಂಗಾರ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈಗಾಗಲೇ ಏಳೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿರುವುದನ್ನು ಪರಿಗಣಿಸಿದ ದೆಹಲಿ ಹೈಕೋರ್ಟ್ ಕಳೆದ ವಾರ ಆತನಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಇನ್ನು ದೆಹಲಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಸಂತ್ರಸ್ತೆ ಮತ್ತು ಆಕೆಯ ಕುಟುಂಬ ತೀವ್ರ ಪ್ರತಿಭಟನೆಯನ್ನೂ ನಡೆಸಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 