ನಿರ್ಭಯಾ ಅಪರಾಧಿಯ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ, ಮಾ 19, ನಿರ್ಭಯಾ ಅತ್ಯಾಚಾರ ಮತ್ತುಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಎಂಬಾತನ ಮರುಪರಿಶೀಲನಾ ರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ಈತ ತಾನು ಅಪರಾಧ ನಡೆದ ಸಂದರ್ಭದಲ್ಲಿ ಅಪ್ರಾಪ್ತನಾಗಿದ್ದೆ. ಆದ್ದರಿಂದ ತಮಗೆ ವಿಧಿಸಿರುವ ಗಲ್ಲುಶಿಕ್ಷೆಯಿಂದ ವಿನಾಯ್ತಿ ನೀಡಬೇಕು ಎಂದು ಮರುಪರಿಶೀಲನಾ ಅರ್ಜಿಯಲ್ಲಿ ಕೋರಿದ್ದನು. ಮಾರ್ಚ್ 5ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ಅಪರಾಧಿಗಳನ್ನು ಮಾ. 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ನಾಲ್ಕನೇ ಬಾರಿಗೆ ಡೆತ್ ವಾರಂಟ್ ಹೊರಡಿಸಿದ್ದರು. 2012ರ ಡಿ. 16ರಂದು ಚಲಿಸುತ್ತಿದ್ದ ಬಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಸಾಮೂಹಿಕ ಹತ್ಯೆ ಮಾಡಿದ ಆರೋಪದ ಮೇಲೆ ಮುಖೇಶ್ ಸಿಂಗ್, ಪವನ್ ಕುಮಾರ್ ಗುಪ್ತ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಸಿಂಗ್ ಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.