ಚುನಾಯಿತರಾದ 48 ತಾಸಿನೊಳಗೆ ಅಭ್ಯರ್ಥಿಗಳ ಅಪರಾಧ ಹಿನ್ನಲೆ ಪ್ರಕಟಿಸುವಂತೆ ರಾಜಕೀಯ ಪಕ್ಷಗಳಿಗೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಫೆ 13, ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಚುನಾಯಿತರಾಗುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ದಾಖಲೆಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳೇನು ಎಂಬ ವಿವರಗಳನ್ನು ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ನ್ಯಾಯಮೂರ್ತಿ ಫಾಲಿ ನಾರಿಮನ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದೆ.ಈ ಕುರಿತು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ, ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಪರಾಧ ಪೂರ್ವಾಪರಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯ 2018 ರ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪಿನ ನಿರ್ದೇಶನ ಗಳನ್ನು ರಾಜಕೀಯ ಪಕ್ಷಗಳು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 